ಗುಜರಾತ್ ವಿಧಾನಸಭಾ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ 156 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು ಸರ್ಕಾರ ರಚಿಸಲು ಸಿದ್ದತೆ ನಡೆಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಕೇವಲ 17 ಸ್ಥಾನಗಳನ್ನು ಎರಡನೇ ಸ್ಥಾನಕ್ಕೆ ತೃಪ್ತಿಕೊಂಡಿದೆ. ಆಮ್ ಆದ್ಮಿ ಪಕ್ಷ 5 ಸ್ಥಾನಗಳು ಮತ್ತು ಇತರರು 4 ಸ್ಥಾನಗಳನ್ನು ಗಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಲು ಸಿದ್ದತೆ ನಡೆಸಿದೆ. ಆಪರೇಷನ್ ಕಮಲ ಮಾಡಬಹುದು ಎಂಬ ಕಾರಣಕ್ಕೆ ತನ್ನ ಪಕ್ಷದ ಶಾಸಕರನ್ನು ರಾಜಸ್ಥಾನದ ರೆಸಾರ್ಟ್ ಗೆ ಕಳುಹಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಹಿಮಾಚಲದಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಪಡೆದಿದ್ದರೆ ಬಿಜೆಪಿ 25 ಸ್ಥಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಿದೆ. ಹೀಗಾಗಿ ಹಿಮಾಚಲದಲ್ಲಿ ಬಿಜೆಪಿ ಗೆಲ್ಲುವ ಕನಸು ಭಗ್ನವಾಗಿದೆ. ಆಮ್ ಆದ್ಮಿ ಪಕ್ಷ ಶೂನ್ಯ ಫಲಿತಾಂಶವನ್ನು ದಾಖಲಿಸಿದೆ. ಇತರರು ಮೂರು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ.