ಕಾಡುಗೊಲ್ಲ ಸಮುದಾಯವು ಎಂದೋ ಪರಿಶಿಷ್ಟ ಪಂಗಡಕ್ಕೆ ಸೇರಬೇಕಿತ್ತು ಎಂದು ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಸ್ವಾಮೀಜಿ ಹೇಳಿದ್ದಾರೆ.
ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿಯ ಜಿ.ಕೆ. ನಾಗಣ್ಣ ಅವರು ಕುಣಿಗಲ್ ನಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಸ್ವಾಮಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬುದಕ್ಕೆ ನಮ್ಮ ಬೆಂಬಲ ಇದೆ ಎಂದು ಮನವಿಯನ್ನು ಸ್ವೀಕರಿಸಿದ ಬಳಿಕ ಹೇಳಿದರು.
ಕಾಡುಗೊಲ್ಲ ಸಮುದಾಯವನ್ನು ಇದುವರೆಗೂ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಯಾಗದಿರುವುದು ದುರದೃಷ್ಟ ಸಂಗತಿಯಾಗಿದೆ. ಕಾಡುಗೊಲ್ಲರು ಎಸ್.ಟಿ ಪಟ್ಟಿಗೆ ಸೇರಬೇಕು ಎಂಬುದು ನನ್ನ ಒತ್ತಾಸೆಯಾಗಿದೆ ಎಂದರು.


