Saturday, October 19, 2024
Google search engine
Homeಮುಖಪುಟಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್.ಪಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಡಿಸೆಂಬರ್ 15ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮೊದಲಾದವರು ಬಿಜೆಪಿ ಮುಖಂಡರನ್ನು ಪಕ್ಷಕ್ಕೆ

ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ವಿಎಸ್.ಪಾಟೀಲ್ ಅವರು ನಮ್ಮ ಜತೆ ವಿಧಾಸಭೆಯಲ್ಲಿ ಕೆಲಸ ಮಾಡಿದ್ದಾರೆ. ಇವರು ನಮ್ಮ ಪಕ್ಷದ ಸಿದ್ದಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲಾ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿಗಳಾದ ಉದ್ಯಮಿ ಶ್ರೀನಿವಾಸ್ ಭಟ್ ದಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇವರು ಉತ್ತಮ ಸಂಘಟನಾಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿಂದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಇವರ ಬಗ್ಗೆಯೂ ಚರ್ಚೆ ಮಾಡಿ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ ಎಂದರು.

ಇನ್ನೂ ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು. ಅವರ ಆರೋಗ್ಯ ಸರಿ ಇಲ್ಲದ ಕಾಋಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗದಿಯಾಗಿವೆ. ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular