Saturday, October 19, 2024
Google search engine
Homeಮುಖಪುಟಅಪ್ಪು ಬಯೋಗ್ರಫಿ ನೀನೇ ರಾಜಕುಮಾರ್ 4ನೇ ಆವೃತ್ತಿ ಬಿಡುಗಡೆ

ಅಪ್ಪು ಬಯೋಗ್ರಫಿ ನೀನೇ ರಾಜಕುಮಾರ್ 4ನೇ ಆವೃತ್ತಿ ಬಿಡುಗಡೆ

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದಿರುವ ಪುನಿತ್ ರಾಜ್ ಕುಮಾರ್ ಅವರ ಬಯೋಗ್ರಫಿ ನೀನೇ ರಾಜಕುಮಾರ 4ನೇ ಆವೃತ್ತಿಯನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು.

ಬೆಂಗಳೂರಿನ ಪಿಆರ್.ಕೆ ಕಚೇರಿಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮುದ್ರಣವನ್ನು ಕಂಡಿರುವ ನೀನೇ ರಾಜಕುಮಾರ್ ಆವೃತ್ತಿಯನ್ನು ಬಿಡುಗಡೆ ಮಾಡಿದರು.

ಮಾರ್ಚು 15, 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದರು. ಈ ಪುಸ್ತಕ ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವ ಪೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ ಎಂದು ಸುದ್ದಿ ಟಿವಿ ಫೇಸ್ ಬುಕ್ ಪೇಜಿನಲ್ಲಿ ಶಶಿಧರ್ ಭಟ್ ಬರೆದುಕೊಂಡಿದ್ದಾರೆ.

ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟ ಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ನೀನೇ ರಾಜಕುಮಾರ್ ಪುಸ್ತಕದ್ದು. ಪುಣಿತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ ಎಂದು ಭಟ್ ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular