ಮುಂಬರುವ ವರ್ಷದಲ್ಲಿ ನಡೆಯಲಿರುವ ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿಯಾಗಿದ್ದು ಚುನಾವಣೆಯಲ್ಲಿ ಶಾಸಕರಾಗಿ ಗೆದ್ದು ಬರುತ್ತೇನೆ ಎಂದು ಜೆಡಿಎಸ್ ಮುಖಂಡ ಅಟ್ಟಿಕಾ ಬಾಬು ಅತಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಜೆಡಿಎಸ್ ಪಕ್ಷದ ಸಕ್ರಿಯೆ ಕಾರ್ಯಕರ್ತನಾಗಿದ್ದು ಮುಂಬರುವ ಚುನಾವಣೆಯಲ್ಲಿ ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿಯಾಗುವುದು ಖಚಿತ ಎಂದು ಹೇಳಿದ್ದಾರೆ.
ಇತ್ತಿಚೆಗೆ ನಡೆದ ಪಂಚರತ್ನ ಯಾತ್ರೆಗೆ ಸಂಬಂಧಿಸಿದಂತೆ ತಾವು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದುಕೊಂಡಿದ್ದೆ. ಆದರೆ ಎರಡು ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿರುವ ಅಭ್ಯರ್ಥಿ ಗೋವಿಂದರಾಜು ಅವರಿಗೆ ಮುಜುಗರ ಆಗಬಾರದು ಎನ್ನುವ ಕಾರಣಕ್ಕೆ ತಾವು ಪಂಚರತ್ನ ಯಾತ್ರೆಯಲ್ಲಿ ಭಾಗಿಯಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂಬರುವ ಚುನಾವಣೆಗೆ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಶತಃಸಿದ್ದ. ಚುನಾವಣೆ ಸಂಬಂಧ ತಮ್ಮದೇ ಆದ ಕಾರ್ಯತಂತ್ರ ಅನುಸರಿಸಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವುದಾಗಿ ಹೇಳಿದರು. ಕಾಂಗ್ರೆಸ್ ಮುಖಂಡರು ಸಹ ತಮಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ತಮ್ಮನ್ನು ಭೇಟಿ ಮಾಡಿದ್ದಾರೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ತುಮಕೂರಿಗೆ ಆಗಮಿಸಿದ ದಿನದಂದು ಕಾಂಗ್ರೆಸ್ ಹಿರಿಯ ಮುಖಂಡ ಶಫಿ ಅಹಮದ್ ಅವರ ಆಶೀರ್ವಾದ ಪಡೆದಿರುವುದಾಗಿ ಪುನರುಚ್ಚರಿಸಿದ ಬಾಬು ತಾವು ತುಮಕೂರು ಜನತೆಯ ಮನಸ್ಸನ್ನು ಗೆಲ್ಲುವ ಸಲುವಾಗಿ ಬಂದಿದ್ದು ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗಲಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.