Sunday, September 8, 2024
Google search engine
Homeಇತರೆದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣ - ದಾವಣಗೆರೆಯಲ್ಲಿ ಅಭಿಮಾನಿಗಳ ಪ್ರತಿಭಟನೆ

ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣ – ದಾವಣಗೆರೆಯಲ್ಲಿ ಅಭಿಮಾನಿಗಳ ಪ್ರತಿಭಟನೆ

ಹೊಸಪೇಟೆಯಲ್ಲಿ ಆಯೋಜಿಸಿದ್ದ ಕ್ರಾಂತಿ ಸಿನಿಮಾದ ಹಾಡು ಬಿಡುಗಡೆ ವೇಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಲೆ ಚಪ್ಪಲಿ ಎಸೆದಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.

ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅಭಿಮಾನಿಗಳು ಬಳಿಕ ಗಾಂಧಿ ಸರ್ಕಲ್, ಪಿ.ಬಿ.ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು. ಚಪ್ಪಲಿ ಎಸೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೂಡಲೇ ಎಲ್ಲಾ ಆರೋಪಿಗಳ ಬಂಧನ ಆಗಬೇಕು. ಬಂಧಿಸಿದರೆ ಸಾಲದು. ಕಠಿಣ ಕ್ರಮ ಆಗಲೇಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಯಾವ ಕಲಾವಿದರಿಗೂ ಈ ರೀತಿ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಳೆದ ಡಿಸೆಂಬರ್ 18ರ ರಾತ್ರಿ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ದರ್ಶನ್ ತೂಗುದೀಪ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಪ್ರಮೋಷನ್ ಗೆ ಚಿತ್ರತಂಡ ಬಂದಿತ್ತು. ಈ ವೇಳೆ ಕೆಲವು ಕಿಡಿಗೇಡಿಗಳು ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular