Thursday, November 21, 2024
Google search engine
Homeಮುಖಪುಟಹುಬ್ಬಳ್ಳಿ - ಬಿಗಿ ಪೊಲೀಸ್ ಭದ್ರತೆಯಲ್ಲಿ ಬೈರಿದೇವರಕೊಪ್ಪ ದರ್ಗಾ ತೆರವು

ಹುಬ್ಬಳ್ಳಿ – ಬಿಗಿ ಪೊಲೀಸ್ ಭದ್ರತೆಯಲ್ಲಿ ಬೈರಿದೇವರಕೊಪ್ಪ ದರ್ಗಾ ತೆರವು

ಹುಬ್ಬಳ್ಳಿಯ ಬೈರಿದೇವರಕೊಪ್ಪದ ಬಳಿಯ ರಸ್ತೆ ಅಗಲೀಕರಣಕ್ಕಾಗಿ ದರ್ಗಾ ತೆರವಿಗೆ ಹೈಕೋರ್ಟ್ ಆದೇಶ ನೀಡಿ ಹಿನ್ನೆಲೆಯಲ್ಲಿ ಹಜರತ್ ಸೈಯದ್ ಮೆಹಮೂದ್ ಷಾ ಖಾದ್ರಿ ದರ್ಗಾದ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತೆರವು ಕಾರ್ಯ ನಡೆದಿದೆ.

ಹು-ಧಾ ಮುಖ್ಯ ರಸ್ತೆಯ ಬೈರಿದೇವರಕೊಪ್ಪ ಬಳಿಯಿರುವ ಹಜರತ್ ಸೈಯದ್ ಮೆಹಮೂದ್ ಷಾ ಖಾದ್ರಿ ದರ್ಗಾ ತೆರವಿಗೆ ಹೈಕೋರ್ಟ್ ಆದೇಶ ನೀಡಿತು. ಈ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆ ರಾತ್ರಿಯೇ ದರ್ಗಾ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೆರವು ಕಾರ್ಯ ನಡೆಸಿತು.

ದರ್ಗಾ ತೆರವು ಕಾರ್ಯಾಚರಣೆ ವೇಳೆಯಲ್ಲಿ ಯಾವುದೇ ಅಡತಡೆಗಳು ಉಂಟಾಗಬಾರದು ಎಂಬ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಹಿನ್ನೆಲೆಯಲ್ಲಿ ದರ್ಗಾ ಬಳಿಯ ಹುಬ್ಬಳ್ಳಿ – ಧಾರವಾಡ ಮುಖ್ಯ ರಸ್ತೆ ಎರಡು ಬದಿಯಲ್ಲಿ 500 ಮೀಟರ್ ವ್ಯಾಪ್ತಿಯಲ್ಲಿ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು.

ಅಲ್ಲದೆ ಬದಲಿ ಮಾರ್ಗ ಕಲ್ಪಿಸಿ ತೆರವು ಕಾರ್ಯಾಚರಣೆ ನಡೆಸಲಾಯಿತು. ವಾಹನ ಸಂಚಾರ ನಿಷೇಧಿತ 500 ಮೀಟರ್ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಬಂದ್ ಮಾಡಲಾಗಿತ್ತು. ಜೊತೆಗೆ ದರ್ಗಾವನ್ನು ಹೊರಗಡೆಯಿಂದ ತಗಡು ಬಳಸಿ ಮುಚ್ಚಿಲಾಗಿದ್ದು, ಒಳಗಡೆ ತೆರವು ಕಾರ್ಯ ನಡೆಸಲಾಗುತ್ತಿದೆ.

ಹಜರತ್ ಸೈಯದ್ ಮೆಹಮೂದ್ ಷಾ ಖಾದ್ರಿ ದರ್ಗಾ ತೆರವು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವತಿಯಿಂದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ‌. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನ ಇಬ್ಬರು ಡಿಸಿಪಿ ಸಾಹಿಲ್ ಬಾಗ್ಲಾ ಹಾಗೂ ಗೋಪಾಲ್ ಬ್ಯಾಕೋಡ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗಳ್ಳಲಾಗಿದ್ದು, ಇಬ್ಬರು ಡಿಸಿಪಿ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

ಇನ್ನೂ ಭದ್ರತೆಗಾಗಿ 5 ಡಿವೈಎಸ್‌ಪಿ ಹಾಗೂ ಎಸಿಪಿಗಳು, 13 ಪೊಲೀಸ್ ಇನ್ಸ್ ಪೆಕ್ಟರ್, 15 ಪಿಎಸ್‌ಐ, 270 ಕಾನ್ಸಟೇಬಲ್, ಆರ್‌ಎ‌ಎಫ್, ಕೆಎಸ್‌ಆರ್‌ಪಿ, ಸಿಎಆರ್ ತುಕಡಿ‌ಗಳನ್ನು ನಿಯೋಜನೆ ಮಾಡಲಾಗಿದೆ. ಇದರ ಮಧ್ಯೆ ಹುಬ್ಬಳ್ಳಿ – ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಭೂರಾಮ್ ಸ್ಥಳಕ್ಕೆ ಆಗಾಗ್ಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ‌ ಪಡೆದುಕೊಳ್ಳುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular