Saturday, October 19, 2024
Google search engine
Homeಮುಖಪುಟಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಹಿಂದುಳಿದ ವರ್ಗಗಳಿಗೆ ಮೀಸಲಾತಿಯಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ಸ್ವಾಮಿ ವಿವೇಕಾನಂದ ಸಹಕಾರ ಸಂಘದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ಅನ್ಯಾಯವಾದರೆ ರಾಜಕೀಯ ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರ ಹೋರಾಟ ಮುಂದುವರೆಸುತ್ತೇನೆ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ 102 ಜಾತಿಗಳಿದ್ದು ಎಲ್ಲರಿಗೂ ಒಳಮೀಸಲಾತಿ ಕಲ್ಪಿಸಿದರೆ ನನ್ನದೇನೂ ತಕರಾರು ಇಲ್ಲ. ಒಳ ಮೀಸಲಾತಿ ನೀಡಿದರೆ ಸಣ್ಣಪುಟ್ಟ ಜಾತಿಗಳಿಗೂ ಸಾಮಾಜಿಕ ನ್ಯಾಯ ದೊರೆಯಲಿದೆ. ಜನ ಸಂಖ್ಯೆಗೆ ಅನುಗುಣವಾಗಿ ಎಲ್ಲಾ ಜಾತಿಗಳಿಗೂ ಮೀಸಲಾತಿ ನೀಡಬೇಕು ಎಂದು ಹೇಳಿದ್ದಾರೆ.

ಹಿಂದುಳಿದ ಜಾತಿಗಳ ಜನಸಂಖ್ಯೆ 52ರಷ್ಟಿದೆ. ಈ ಸಮುದಾಯಗಳಿಗೆ 27ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಶೇ.4ರಷ್ಟಿರುವ ಮೇಲ್ಜಾತಿಗಳಿಗೆ ಶೇ.10ರಷ್ಟು ಮೀಸಲಾತಿ ಕೊಡಲಾಗಿದೆ. ಬೇರೆ ರಾಜ್ಯಗಳಲ್ಲಿ ಶೇ.50ರಷ್ಟು ಮೀಸಲಾತಿ ಮೀರಿದರೆ ಅದನ್ನು ರದ್ದುಗೊಳಿಸಲಾಗುತ್ತಿದೆ. ಆದರೆ ಬಿಜೆಪಿ ನಿಯಮ ಮೀರಿ ಮೀಸಲಾತಿ ಹೆಚ್ಚಿಸುತ್ತಿದ್ದರೂ ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದು ಆರೋಪಿಸಿದರು.

ನಟ ಮುಖ್ಯಮಂತ್ರಿ ಚಂದ್ರು ಬಿ.ಜೆ.ಪಿಯ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೀಸಲಾತಿಯಲ್ಲಿ ಹಿಂದು ಸಾದರ ಸಮುದಾಯಕ್ಕೆ ಅನ್ಯಾಯ ಮಾಡಿದರು. ಲಿಂಗಾಯತ ಸಾದರಿಗೆ 2A ಜಾತಿ ಪ್ರಮಾಣ ಪತ್ರ ನೀಡಿ ಅನ್ಯಾಯ ಮಾಡಿದರು ಎಂದು ಆಪಾದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular