Saturday, October 19, 2024
Google search engine
Homeಮುಖಪುಟಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ತುಮಕೂರು ಜಿಲ್ಲಾ ಕಾಡುಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಚಂಗಾವರ ಕರಿಯಪ್ಪ ಒತ್ತಾಯಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಡುಗೊಲ್ಲರು ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟು ಲಕ್ಷಣ ಹೊಂದಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಲು ಅರ್ಹವೆಂದು ಪರಿಗಣಿಸಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರವು ಕುಲಶಾಸ್ತ್ರ ಅಧ್ಯಯನ ಮಾಡಲು ಮೈಸೂರು ವಿಶ್ವವಿದ್ಯಾನಿಲಯದ ಮಾನವ ಶಾಸ್ತç ವಿಭಾಗದ ಮುಖ್ಯಸ್ಥರಾದ ಪ್ರೊ. ಅನ್ನಪೂರ್ಣಮ್ಮ ಅವರನ್ನು ನೇಮಿಸಿತ್ತು.

ಪ್ರೊ. ಅನ್ನಪೂರ್ಣಮ್ಮನವರು, ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಡುಗೊಲ್ಲರ ಬಗ್ಗೆ ಅಧ್ಯಯನ ಮಾಡಿ ಕಾಡುಗೊಲ್ಲರು ಪರಿಶಿಷ್ಟವರ್ಗಕ್ಕೆ ಸೇರಲು ಅತ್ಯಂತ ಅರ್ಹ ಸಮುದಾಯವೆಂದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದರು ಎಂದರು.

2014 ಡಿಸೆಂಬರ್ 26 ರಲ್ಲಿ ಸಿದ್ದರಾಮಯ್ಯನವರ ಕಾಂಗ್ರೇಸ್ ಸರ್ಕಾರ ಕಾಡುಗೊಲ್ಲ ಸಮುದಾಯವು ಪರಿಶಿಷ್ಟ ವರ್ಗಕ್ಕೆ ಸೇರಲು ಅತ್ಯಂತ ಅರ್ಹ ಜನಾಂಗವೆಂದು ಸಚಿವ ಸಂಪುಟದಲ್ಲಿ ನಡಾವಳಿ ಮಾಡಿ ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಲಾಗಿತ್ತು ಎಂದು ಹೇಳಿದರು.

ಆದರೂ ಸಹ ಇಲ್ಲಿಯವರೆಗೂ ಕೇಂದ್ರ ಸರ್ಕಾರ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿಲ್ಲ ಆದ ಕಾರಣ ತ್ವರಿತವಾಗಿ ಕ್ರಮ ವಹಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular