Thursday, September 19, 2024
Google search engine
Homeಮುಖಪುಟಮಾಸ್ಕ್ ಕಡ್ಡಾಯ - ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಮಾಸ್ಕ್ ಕಡ್ಡಾಯ – ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸಾರ್ವಜನಿಕ ಸ್ಥಳಗಳು ಮತ್ತು ಒಳಾಂಗಣ ಸಭಾಂಗಣಗಳಲ್ಲಿ ಸೇರುವ ಜನರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈಲು, ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ ಒಳಾಂಗಣ ಸಭಾಂಗಣದಲ್ಲಿ ಸೇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ದೈಹಿಕ ಅಂತರವನ್ನು ಕಾಪಾಡಬೇಕು ಎಂದು ಹೇಳಿದ್ದಾರೆ.

ಬಸ್ ಗಳಲ್ಲಿ ಸೀಟುಗಳು ಇರುವಷ್ಟು ಪ್ರಯಾಣಿಕರಿಗೆ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಯಾವುದೇ ಕಾರಣಕ್ಕೂ ಬಸ್ ಗಳಲ್ಲಿ ಆಸನಗಳಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬಾರದು. ಪ್ರಯಾಣಿಕರು ಮಾಸ್ಕ್ ಧರಿಸಿ ದೈಹಿಕ ಅಂತರ ಕಾಪಾಡಬೇಕು ಎಂದು ತಿಳಿಸಿದ್ದಾರೆ.

ಹೊರ ದೇಶಗಳಿಂದ ಬರುವವರಿಗೆ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಆರ್.ಟಿ.ಪಿಸಿಆರ್ ಪರೀಕ್ಷೆ ಮಾಡಲಾಗುವುದು. ಕೋವಿಡ್ ಸೋಂಕು ಇರುವವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದರು.

ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ವಿದೇಶದಿಂದ ಬಂದವರಲ್ಲಿ ಸೋಂಕು ಕಂಡು ಬಂದರೆ ಅವರನ್ನು ಈ ಎರಡು ಆಸ್ಪತ್ರೆಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular