ಮೈಸೂರಿನ ಪಿರಯಾಪಟ್ಟಣದ ಗೋಣಿಕೊಪ್ಪದ ರಸ್ತೆ ಪಕ್ಕದಲ್ಲಿರುವ ಸೆಂಟ್ ಮೇರಿ ಚರ್ಚ್ ಗೆ ಹಾನಿಗೊಳಿಸಲಾಗಿದ್ದು, ಶಿಶು ಏಸುವಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಪ್ರಕರಣದ ಕುರಿತು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಅಪರಿಚಿತ ವ್ಯಕ್ತಿಗಳು ಸೇಂಟ್ ಮೇರಿ ಚರ್ಚ್ ಅನ್ನು ಧ್ವಂಸಗೊಳಿಸಿದ್ದು ಶಿಶು ಏಸು ಪ್ರತಿಮೆಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾವು ಆರೋಪಿಗಳನ್ನು ಹಿಡಿಯಲು ತಂಡವನ್ನು ರಚಿಸಿದ್ದೇವೆ. ಅಲ್ಲದೆ, ನಾವು ಹತ್ತಿರದ ಸಿಸಿ ಕ್ಯಾಮೆರಾಗಳಲ್ಲಿ ದಾಖಲಾಗಿರುವ ಸಿಸಿಟಿವಿ ದೃಶ್ಯಗಳನ್ನು ಹುಡುಕುತ್ತಿದ್ದೇವೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಚರ್ಚ್ ನಲ್ಲಿ ಹಣದ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವುದರಿಂದ ಕಳ್ಳತನ ಪ್ರಕರಣ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ಮಂಗಳವಾರ ಸಂಜೆ 6 ಗಂಟೆಗೆ ಚರ್ಚ್ ಗೆ ಪ್ರವೇಶಿಸಿದಾಗ ಎಂಟು ಧ್ವನಿ ವ್ಯವಸ್ಥೇಗಳು, ಮುಂಭಾಗದ ಟೇಬಲ್ ಮತ್ತು ಹೂವಿನ ಕುಂಡಗಳು ಹಾನಿಗೊಳಗಾಗಿವೆ ಎಂದು ಚರ್ಚ್ ನ ಪಾದ್ರಿ ಫಾದರ್ ಜಾನ್ ಪಾಲ್ ಅವರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಬಗ್ಗೆ ಫಾದರ್ ಜಾನ್ ಪಾಲ್ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಎಸಗಿದ ವ್ಯಕ್ತಿಗಳ ಪತ್ತೆಗ ಶೋಧ ಕಾರ್ಯ ಮುಂದುವರೆಸಿದ್ದಾರೆ.