Thursday, September 19, 2024
Google search engine
Homeಮುಖಪುಟಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ಅಸಮಾಧಾನ ಸೂಚಿಸಿದ್ದು ನಿಜ - ಸಾಹಿತಿ ಪುರುಷೋತ್ತಮ ಬಿಳಿಮಲೆ

ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ಅಸಮಾಧಾನ ಸೂಚಿಸಿದ್ದು ನಿಜ – ಸಾಹಿತಿ ಪುರುಷೋತ್ತಮ ಬಿಳಿಮಲೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ ಎಂದು ಹಿರಿಯ ಸಾಹಿತಿ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ಧನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ ಎಂದು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ

ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ ಎಂದು ಅಭಿಪ್ರಾಯಟ್ಟಿದ್ದಾರೆ.

ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಷಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ ಎಂದಿದ್ದಾರೆ.

ಅವರು ಪೆಂಡಾಲ್‌ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು, ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್‌ ಜೋಷಿಯವರ ಮಾತುಗಳೇ ಸಾಕ್ಷಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular