ತುಮಕೂರು ವಿಶ್ವವಿದ್ಯಾಲಯದ ಮೊದಲ ಕುಲಪತಿ ಡಾ.ಒ.ಅನಂತರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 2005-2009ರವರೆಗೆ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಕಾರ್ಯ ನಿರ್ವಹಿಸಿದ್ದರು.
ಅವರ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿತ್ತು. ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಓ ಅನಂತರಾಮಯ್ಯ ಅವರು 15ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅನಂತರಾಮಯ್ಯ ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.


