ಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದುಕೊಂಡು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಹಿತಿಗಳ ಅನಿಸಿಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ವ್ಯವಸ್ಥಿತವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದರು.
ಚುನಾವಣಾ ಅಖಾಡಕ್ಕೆ ಧುಮುಕಿ ಬಹಳ ದಿನಗಳಾಗಿವೆ. ಯಾರ ಆಡಳಿತದಲ್ಲಿ ಯಾರು ಪರಿಶಿಷ್ಟರಿಗೆ ಕಾರ್ಯಕ್ರಮ ನೀಡಿದ್ದಾರೆ. ಏನು ಅನುಷ್ಠಾನವಾಗಿದೆ. ಪರಿಶಿಷ್ಟರ ಬದುಕು ಯಾರ ಕಾಲದಲ್ಲಿ ಎಷ್ಟು ಉತ್ತಮಗೊಂಡಿದೆ. ಅವರ ಹಕ್ಕುಗಕನ್ನು ಯಾರು ರಕ್ಷಿಸಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.
ಸ್ವಾಮೀಜಿಗಳು ಟಿಕೆಟ್ ಆಕಾಂಕ್ಷಿಗಳಾಗಿ ವಿಧಾನಸಭೆಗೆ ಧುಮುಕುವ ಸಾಧ್ಯತೆಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ನನಗೆ ತಿಳಿದಿಲ್ಲ. ವಿರೋಧ ಪಕ್ಷಗಳು ಏನು ಹೇಳಿವೆ ಎನ್ನುವುದು ತಿಳಿದಿಲ್ಲ ಎಂದು ತಿಳಿಸಿದರು.