2025ರ ವಿಧಾನಸಭಾ ಚುನಾವಣೆಯ ಬಳಿಕ ಉಪಮುಖ್ಯಮಂತ್ರಿ ಮತ್ತು ಆರ್.ಜೆ.ಡಿ. ನಾಯಕ ತೇಜಸ್ವಿ ಯಾದವ್ ಬಿಹಾರದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಸುಳಿವು ನೀಡಿದ್ದಾರೆ.
ನಾನು ಪ್ರಧಾನಿ ಅಭ್ಯರ್ಥಿ ಅಥವಾ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನನ್ನ ಗುರಿಯಾಗಿದೆ. ನಾವು ತೇಜಸ್ವಿ ಯಾದವ್ ಅವರನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ಹೇಳಿದ್ದಾರೆ.
ತೇಜಸ್ವಿ ಯಾದವ್ ಇಲ್ಲಿದ್ದಾರೆ. ಅವರನ್ನು ಮುಂದಕ್ಕೆ ಕೊಂಡೊಯ್ಯಲು ನಾನು ಏನು ಮಾಡಬೇಕೋ ಅದನ್ನು ಮಾಡಿದ್ದೇನೆ. ನಾನು ಅವರನ್ನು ಇನ್ನೂ ಮುಂದಕ್ಕೆ ಕೊಂಡಯ್ಯತ್ತೇನೆ. ಅದನ್ನು ನೀವು ನೋಡುತ್ತೀರಿ ಎಂದು ತಿಳಿಸಿದ್ದಾರೆ


