ಹಿರಿಯ ರಾಜಕಾರಣಿ ಹಾಗೂ ತುಮಕೂರು ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ನೀರಾವರಿ ಹೋರಾಟಗಳಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಹಮ್ಮಿಕೊಂಡಿದ್ದ ಗುರುಸಿದ್ದರಾಮೇಶ್ವರ ಜಯಂತಿಯಲ್ಲಿಪಾಲ್ಗೊಂಡಿದ್ದ ಜಿ.ಎಸ್.ಬಸವರಾಜು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ನಿಮ್ಮ ಜೊತೆ ನೀರಾವರಿ ಯೋಜನೆಗಳ ಅನುಷ್ಠಾನದ ಸಮಯದಲ್ಲಿ ನಿಮ್ಮ ಪರವಾಗಿ ನಿಲ್ಲುತ್ತೇನೆ. ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದು ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸಿದರು.