ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಮುಖಂಡ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರನ್ನು ಯಾಕೆ ಕೇಂದ್ರ ಸಲಹಾ ಸಮಿತಿಗೆ ನೇಮಕ ಮಾಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಪಕ್ಷ ಯಾವುದೇ ನಿರ್ಧಾರ ಮಾಡಿದರೂ ಅಲ್ಲಿ ಸ್ಪರ್ಧಿಸುವೆ. ಈಗ ನಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಶಿಕಾರಿಪುರ ಕ್ಷೇತ್ರದಲ್ಲಿ ಓಡಾಡುತ್ತಿರುವೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಅವರು ಮಾತನಾಡುವ ರೀತಿ ಸರಿಯಲ್ಲ ಎಂದು ಹೇಳಿದರು.
ಸ್ಯಾಂಟ್ರೋ ರವಿ ಅವರನ್ನ ರಕ್ಷಣೆ ಮಾಡುವುದಾದರೆ ಬಂಧನವೇ ಆಗುತ್ತಿರಲಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಗಳಿಗೆ ಗೃಹ ಸಚಿವರು ಉತ್ತರ ಕೊಡುತ್ತಾರೆ ಎಂದು ತಿಳಿಸಿದ್ದಾರೆ.