Saturday, October 19, 2024
Google search engine
Homeಮುಖಪುಟನಾಗಾಲ್ಯಾಂಡ್, ಮೇಘಾಲಯ, ತ್ರಿಪುರ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ನಾಗಾಲ್ಯಾಂಡ್, ಮೇಘಾಲಯ, ತ್ರಿಪುರ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗವು ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಫೆಬ್ರವರಿ 16ರಂದು ತ್ರಿಪುರದಲ್ಲಿ, ಫೆಬ್ರವರಿ 27 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 2ರಂದು ಮತ ಎಣಿಕೆ ನಿಗದಿಪಡಿಸಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ.

ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರ ವಿಧಾನಸಭೆಗಳ ಐದು ವರ್ಷಗಳ ಅವಧಿಯು ಕ್ರಮವಾಗಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22ರಂದು ಕೊನೆಗೊಳ್ಳಲಿದೆ. ಆ ಅವಧಿಗೆ ಮೊದಲು ಹೊಸ ಅಸೆಂಬ್ಲಿಗಳನ್ನು ರಚಿಸಬೇಕಾಗಿದೆ ಎಂದು ಹೇಳಿದರು.

ತ್ರಿಪುರಾದಲ್ಲಿ ಜನವರಿ 21 ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಜನವರಿ 30ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜನವರಿ 31ರಂದು ನಾಮಪತ್ರ ಪರಿಶೀಲನೆ, ಫೆಬ್ರವರಿ 2ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.

ಮೇಘಾಲಯ ಮತ್ತು ನಾಗಾಲ್ಯಂಡ್ ನಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜನವರಿ 31ಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಫೆಬ್ರವರಿ 7ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆ.8ರಂದು ನಾಮಪತ್ರ ಪರಿಶೀಲನೆ, ಫೆಬ್ರವರಿ 10ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular