ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ ಸಿ ಮುಖ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 31 ರಂದು ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 3ರಂದು ಗಣಿತ, ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 6ರಂದು ದ್ವಿತೀಯ ಭಾಷೆ ಇಂಗ್ಲೀಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯಗಳ ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 10ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 12ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಪರೀಕ್ಷೆಗಳು ನಡೆಯಲಿವೆ.
ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ.