Saturday, October 19, 2024
Google search engine
Homeಮುಖಪುಟಖಳ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

ಖಳ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಹೆಸರಾಂತ ಖಳ ನಟ ಹಾಗೂ ಪೋಷಕ ನಟ ಲಕ್ಷ್ಮಣ ಹೃದಯಾಘಾತಕ್ಕೊಳಗಾಗಿ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮಣ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಂಜಾನೆ ಸುಮಾರು 3.30 ಸಮಯದಲ್ಲಿ ಲಕ್ಷ್ಮಣ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು ಲಕ್ಷ್ಮಣ್‌ ಅವರನ್ನು ನಾಗರಬಾವಿಯ ಜಿ.ಎಂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲಕ್ಷ್ಮಣ ಅವರು ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ಲಕ್ಷ್ಮಣ ಪಾತ್ರ ಮಾಡಿದ್ದಾರೆ.

ಡಾ.ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕನಾಗ್‌, ರವಿಚಂದ್ರನ್ ಮತ್ತು ಶಿವರಾಜಕುಮಾರ್ ಹೀಗೆ ಹಲವಾರು ಪ್ರಸಿದ್ದ ನಟರ ಜೊತೆ ನಟಿಸಿ ಜನಮನ್ನಣೆ ಗಳಿಸಿದ್ದರು. ಬಹುತೇಕ ಸಿನಿಮಾಗಳಲ್ಲಿ ಅವರು ಖಳನಟನಾಗಿ ಹಾಗೂ ಇನ್‌ಸ್ಪೆಕ್ಟರ್‌ ಪಾತ್ರದಲ್ಲಿ ನಟಿಸಿದ್ದಾರೆ ವಿಶೇಷವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular