Friday, October 18, 2024
Google search engine
Homeಮುಖಪುಟಲಖಿಂಪುರಿಖೇರಿ ರೈತರ ಹತ್ಯಾ ಪ್ರಕರಣ - ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ 8 ವಾರಗಳ ಮಧ್ಯಂತರ...

ಲಖಿಂಪುರಿಖೇರಿ ರೈತರ ಹತ್ಯಾ ಪ್ರಕರಣ – ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ 8 ವಾರಗಳ ಮಧ್ಯಂತರ ಜಾಮೀನು

ಎಂಟು ಜನ ರೈತರ ಸಾವಿಗೆ ಕಾರಣವಾದ 2021ರ ಲಖಿಂಪುರಖೇರಿ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಗೆ ಸುಪ್ರೀಂಕೋರ್ಟ್ ಬುಧವಾರ ಎಂಟು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಕೆ.ಮಹೇಶ್ವರಿ ಅವರಿದ್ದ ವಿಭಾಗೀಯ ಪೀಠವು ಮಧ್ಯಂತರ ಜಾಮೀನು ಅವಧಿಯಲ್ಲಿ ಆಶಿಶ್ ಉತ್ತರ ಪ್ರದೇಶದಲ್ಲಿ ಅಥವಾ ದೆಹಲಿಯಲ್ಲಿ ಉಳಿಯಬಾಋದು ಎಂದು ನಿರ್ದೇಶಿಸಿದೆ.

ಅಕ್ಟೋಬರ್ 3, 2021 ರಂದು, ಅಂದಿನ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಹಿಂಸಾಚಾರ ಭುಗಿಲೆದ್ದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾದಲ್ಲಿ ಎಂಟು ಜನರು ಸಾವನ್ನಪ್ಪಿದರು.

ಉತ್ತರ ಪ್ರದೇಶ ಪೊಲೀಸ್ ಎಫ್‌ಐಆರ್ ಪ್ರಕಾರ, ಆಶಿಶ್ ಕುಳಿತಿದ್ದ ಎಸ್‌ಯುವಿಯಿಂದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ, ಸಿಟ್ಟಿಗೆದ್ದ ರೈತರು ಎಸ್‌ಯುವಿ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದಿದ್ದಾರೆ ಎಂದು ಆರೋಪಿಸಲಾಗಿತ್ತು.

ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತನೂ ಸಾವನ್ನಪ್ಪಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಕಳೆದ ವರ್ಷ ಜುಲೈ 26 ರಂದು ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್‌ನ ಆದೇಶವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular