ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದ ನನಗೆ ಪದ್ಮಭೂಷಣ ಪ್ರಶಸ್ತಿ ಬಂದಿದೆ. ಇಲ್ಲದಿದ್ದರೆ ಬರುತ್ತಿರಲಿಲ್ಲ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದಾರೆ.
ಮೈಸೂರಿನ ಕುವೆಂಪು ನಗರದಲ್ಲಿರುವ ಎಸ್.ಎಲ್. ಭೈರಪ್ಪ ಅವರ ನಿವಾಸದಲ್ಲಿ ಶಾಸಕ ರಾಮದಾಸ್ ಅವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ನನ್ನ ಕಾದಂಬರಿಗಳ ಮೂಲ ಭಾರತದ ಸಂಸ್ಕೃತಿ. ಈ ಸಂಸ್ಕೃತಿ ಏಕ ರೂಪದಲ್ಲಿ ಬೆಳೆದಿದೆ ಎಂದು ಅಭಿಪ್ರಾಯಪಟ್ಟರು.
ಗಣರಾಜ್ಯ ಮೊದಲಿಂದಲ್ಲೂ ಇತ್ತು. ಸಂವಿಧಾನದ ಬಹುಭಾಗ ನಮ್ಮ ಮೊದಲಿದಂಲೂ ಇತ್ತು. ಎಷ್ಟೋ ದೇಶದಲ್ಲಿ ಸ್ವಾತಂತ್ರ್ಯ ಪಡೆದಿದ್ದಾರೆ. ಆದರೆ ಅಲ್ಲಿ ಸ್ವಾತಂತ್ರ್ಯ ಉಳಿದುಕೊಂಡಿಲ್ಲ. ನಮ್ಮಲ್ಲಿ ಸಂವಿಧಾನ ಇದೆ. ಈ ದೇಶವನ್ನು ಕಾಪಾಡುತ್ತದೆ ಎಂದು ಹೇಳಿದರು.
ಗಣರಾಜ್ಯದ ಉತ್ಸವ ಬಹಳ ಮಹತ್ತರವಾದದ್ದು. ಇಲ್ಲೇ ಕೂತಿದ್ದೇನೆ. ಇಲ್ಲೇ ಬರೆದಿದ್ದೇನೆ. ಮೋದಿ ಅವರು ಪ್ರಧಾನಿ ಆದ ಕಾರಣವೇ ನನಗೆ ಈ ಪ್ರಶಸ್ತಿ ಬಂತು. ಇಲ್ಲದಿದ್ದರೆ ಬರುತ್ತಿರಲಿಲ್ಲ ಎಂದು ತಿಳಿಸಿದರು.
ಲೇಖಕ ಸತ್ತೇ ಸಾಯುತ್ತಾನೆ. ಆದರೆ ಅವನ ಬರೆದ ಪುಸ್ತಕ ಎಷ್ಟು ದಿನ ಪ್ರಸ್ತುತ ಇರುತ್ತದೋ ಅಲ್ಲಿಯವರೆಗೆ ಲೇಖಕ ಸದಾ ಜೀವಂತ. ನನ್ನ ಕೃತಿಗಳಿಗೆ ಅಂತಹ ಶಕ್ತಿ ಇದ್ದರೆ ನನಗೆ ಸಂತೋಷ ಎಂದು ಅವರು ಹೇಳಿದರು.