Friday, November 22, 2024
Google search engine
Homeಮುಖಪುಟಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪಕ್ಷಬೇಧ ಮರೆತು ಒಗ್ಗಟ್ಟು ಪ್ರದರ್ಶಿಸಿದ ಎಡಗೈ ಸಮುದಾಯ ಮುಖಂಡರು

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪಕ್ಷಬೇಧ ಮರೆತು ಒಗ್ಗಟ್ಟು ಪ್ರದರ್ಶಿಸಿದ ಎಡಗೈ ಸಮುದಾಯ ಮುಖಂಡರು

ತುಮಕೂರು ನಗರದ ನಾಗಾರ್ಜುನ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಎಡಗೈ ಸಮುದಾಯದ ಮುಖಂಡರು ಒಗ್ಗಟ್ಟು ಪ್ರದರ್ಶಿಸಿದರು.

ಒಳಮೀಸಲಾತಿ ಜಾರಿ ಮಾಡಲೇಬೇಕು. ಅದಕ್ಕಾಗಿ ಅರ್ಜಿಗಳನ್ನು ಭರ್ತಿ ಮಾಡಿಸಿಕೊಳ್ಳಲಾಗುತ್ತದೆ. ಭವಿಷ್ಯದ ದಿನಗಳಲ್ಲಿ ಸಮುದಾಯದ ಸಂಘಟನೆ ಮಾಡಬೇಕು ಎಂದು ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಸಮುದಾಯದ ಮುಖಂಡರಿಗೆ ತಿಳಿಸಿದರು.

ಹಲವು ಪ್ರಗತಿಪರ ದಲಿತ ನಾಯಕರು ತನ್ನ ಸಮಾಜಕ್ಕಾಗಿ ತ್ಯಾಗ, ಸಮಯ ಮತ್ತು ಸ್ಪಂದನೆಯನ್ನು ಕೊಡಬೇಕು. ನಮ್ಮ ಸಮುದಾಯದ ಮುಖಂಡರು ಸಮಾಜದ ಹೆಸರು ಹೇಳಿದರೆ ಎಲ್ಲಿ ಸೋತುಹೋಗುತ್ತೇವೆಯೋ ಎಂದು ಸಮಾಜದ ಹೆಸರು ಹೇಳಿಕೊಳ್ಳುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಶಾಸಕ ಗಂಗಹನುಮಯ್ಯ, ಮುಖಂಡರಾದ ವೈ.ಎಚ್.ಹುಚ್ಚಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆಂಚಮಾರಯ್ಯ, ಕೆ.ವೈ.ಬಾಲಕೃಷ್ಣಯ್ಯ ಇತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular