Saturday, November 23, 2024
Google search engine
Homeಮುಖಪುಟಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ಜಾಹಿರಾತು ನೀಡಲು ರಾಜ್ಯ ಸರ್ಕಾರ...

ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ಜಾಹಿರಾತು ನೀಡಲು ರಾಜ್ಯ ಸರ್ಕಾರ ಆದೇಶ

ಬ್ರಾಹ್ಮಣ ಸಮುದಾಯದ ಒಡೆತನದಲ್ಲಿ ನಡೆಯುತ್ತಿರುವ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟಗಳಷ್ಟು ಜಾಹಿರಾತು ನೀಡುವಂತೆ ಕರ್ನಾಟಕ ರಾಜ್ಯ ಸರ್ಕಾರ ವಾರ್ತಾ ಇಲಾಖೆಗೆ ಆದೇಶ ಹೊರಡಿಸಿ ಸೂಚಿಸಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

2023ನೇ ಜನವರಿ 24 ರ ಮಂಗಳವಾರ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟಗಳ ಜಾಹಿರಾತು ಬಿಡುಗಡೆ ಮಾಡಲು ಸರ್ಕಾರದ ಮಂಜೂರಾತಿ ಆದೇಶ ಹೊರಡಿಸಿರುವುದಾಗಿ ವಾರ್ತಾ ಇಲಾಖೆ ತಿಳಿಸಿದೆ.

ಬ್ರಾಹ್ಮಣರ ಒಡೆತನ ಪತ್ರಿಕೆಗಳಿಗೆ ಜಾಹಿರಾತು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ವಾರ್ತಾ ಇಲಾಖೆಗೆ ಜನವರಿ 13ರ ಶುಕ್ರವಾರ ಆದೇಶ ನೀಡಿದೆ ಎಂದು ಸುತ್ತೋಲೆಯಲ್ಲಿ ವಾರ್ತಾ ಇಲಾಖೆ ಉಲ್ಲೇಖಿಸಿದೆ. ಈ ಬಗ್ಗೆ 2022-23ರ ಸಾಲಿನ ಬಜೆಟ್ ನಲ್ಲಿ ಘೋಷಿಸಲಾಗಿದ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular