Friday, November 22, 2024
Google search engine
Homeಮುಖಪುಟಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಮುಷ್ಕರ ನಿರತ ರಾಜ್ಯ ಅಂಗನವಾಡಿ ಕಾರ್ಯಕರ್ತರನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಅತ್ಯಂತ ಖಂಡನೀಯ. ಮುಖ್ಯಮಂತ್ರಿಗಳು ತಕ್ಷಣ ಅಂಗನವಾಡಿ ಕಾರ್ಯಕರ್ತರನ್ನು ಕರೆದು ಅವರ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತರು ಮಳೆ- ಚಳಿ-ಗಾಳಿ ಎನ್ನದೆ ಬೀದಿಯಲ್ಲಿ ಠಿಕಾಣಿ ಹೂಡಿ ಮುಷ್ಕರದಲ್ಲಿ ತೊಡಗಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ನಂತರವೂ ರಾಜ್ಯ ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿರುವುದು ಖಂಡನೀಯ ಎಂದಿದ್ದಾರೆ.

ಸೇವೆ ಕಾಯಂ, ವೇತನ ಹೆಚ್ಚಳ ಮತ್ತು ಮತ್ತು ನಿವೃತ್ತಿ ಸೌಲಭ್ಯವೂ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಮಾತುಕತೆಯ ಮೂಲಕ ಮುಷ್ಕರ ನಿರತರ ಬೇಡಿಕೆ ಈಡೇರಿಸಲು ಸಾಧ್ಯವಿತ್ತು. ಆದರೆ ಸರ್ಕಾರ ಉದ್ಧಟತನದಿಂದ ಸಂಘರ್ಷದ ಹಾದಿ ಆಯ್ದುಕೊಂಡಿದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರದ ಕಾಲದ ಐದು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ರೂ.5,000ಗಳಿಂದ ರೂ.8000ಕ್ಕೆ ಮತ್ತು ಸಹಾಯಕಿಯರ ವೇತನವನ್ನು ರೂ.2500 ರಗಳಿಂದ ರೂ.4000ಕ್ಕೆ ಹೆಚ್ಚಿಸಿದ್ದೆವು. ಆದರೆ ರಾಜ್ಯದ ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಮುಷ್ಕರವನ್ನು ತಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದು ಇದು ಪ್ರಜಾತಂತ್ರ ವಿರೋಧಿ ಪ್ರಯತ್ನ ಎಂದು ಖಂಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular