Tuesday, December 3, 2024
Google search engine
Homeಮುಖಪುಟಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ - ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ – ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ

ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5300 ಕೋಟಿ ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಿಂದ ಬ್ಯಾಡಗಿ ತಾಲ್ಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಾತನಾಡಿದರು.

ಭದ್ರ ಮೇಲ್ದಂಡೆ ಯೋಜನೆ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ 1 ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದೆ. ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ತಸ್ತಾವನೆ ಕಳಿಸಿದ್ದೆವು. ಹೀಗಾಗಿ 5300 ಕೋಟಿ ನೀಡಿದ್ದು ಸ್ವಾಗತಾರ್ಹ ಎಂದರು.

ಕರ್ನಾಟಕದ ಹಲವಾರು ಯೋಜನೆಗಳಲ್ಲಿ ಇದು ಮೊದಲು ರಾಷ್ಟ್ರೀಯ ಯೋಜನೆ. ಈ ಯೋಜನೆಗೆ ಇಷ್ಟು ದೊಡ್ಡ ಪ್ರಮಾಣದ ಅನುನಾದ ಘೋಷಣೆ ಮಾಡಿದ್ದು ಸಂತಸದ ಸಂಗತಿ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular