Saturday, July 27, 2024
Google search engine
Homeಮುಖಪುಟನಿರುದ್ಯೋಗ ಸಮಸ್ಯೆಗೆ ಬಜೆಟ್ ನಲ್ಲಿ ಪರಿಹಾರ ಇಲ್ಲ - ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪ

ನಿರುದ್ಯೋಗ ಸಮಸ್ಯೆಗೆ ಬಜೆಟ್ ನಲ್ಲಿ ಪರಿಹಾರ ಇಲ್ಲ – ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪ

ದೇಶದ ಹಣದುಬ್ಬರ, ನಿರುದ್ಯೋಗ ಮುಂತಾದವುಗಳನ್ನು ಪರಿಹರಿಸುವಂತಹ ಆಯವ್ಯಯ ಮಂಡಿಸುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪೃಥ್ವಿ ರೆಡ್ಡಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ದಿನದಿಂದಲೂ ನಿರುದ್ಯೋಗ ಹಾಗೂ ಹಣದುಬ್ಬರ ಸಮಸ್ಯೆ ಉಲ್ಬಣಿಸಿದೆ. ಇದನ್ನು ನಿರ್ಲಕ್ಷಿಸುತ್ತಲೇ ಬಂದಿದ್ದಾರೆ. ಪರಿಣಾಮವಾಗಿ, ಉನ್ನತ ಶಿಕ್ಷಣ ಪಡೆದ ವಿದ್ಯಾವಂತರು ಕೂಡ ಸಣ್ಣಸಣ್ಣ ನೌಕರಿಗಳಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಗತ್ಯ ವಸ್ತುಗಳನ್ನು ಖರೀದಿಸಲು ಕೂಡ ಜನಸಾಮಾನ್ಯರು ಕಷ್ಟ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಈ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಆಯವ್ಯಯವಾಗಿದ್ದು, ಇದರಲ್ಲಾದರೂ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ ಎಂಬ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಆರೋಪಿಸಿದರು.

ಶಿಕ್ಷಣ ಹಾಗೂ ಆರೋಗ್ಯ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಆಮ್‌ ಆದ್ಮಿ ಪಾರ್ಟಿ ಬಲವಾಗಿ ಪ್ರತಿಪಾದಿಸುತ್ತದೆ. ಇದರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದೇವೆ. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಶಿಕ್ಷಣ ವಲಯದ ಅನುದಾನವನ್ನು ಶೇ. 2.64ರಿಂದ ಶೇ. 2.5ಕ್ಕೆ ಇಳಿಸಿದ್ದಾರೆ. ಆರೋಗ್ಯ ವಲಯದ ಅನುದಾನವನ್ನು ಶೇ. 2.2ರಿಂದ ಶೇ. 1.98ಕ್ಕೆ ಇಳಿಕೆ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಟೀಕಿಸಿದರು.

ಮಹಿಳಾ ಸಮ್ಮಾನ ಉಳಿತಾಯ ಪ್ರಮಾಣಪತ್ರ ಹೆಸರಿನಲ್ಲಿ ಕೇವಲ 7.7ರಷ್ಟು ಬಡ್ಡಿ ನೀಡುವ ಯೋಜನೆ ಘೋಷಿಸಿರುವುದು ಮಹಿಳೆಯರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಹಲವು ಬ್ಯಾಂಕ್‌ಗಳು ಇದಕ್ಕಿಂತ ಹೆಚ್ಚಿನ ಬಡ್ಡಿ ನೀಡುತ್ತಿರುವಾಗ, ಮಹಿಳೆಯರಿಗೆ ಈ ಯೋಜನೆಯಿಂದ ಹೆಚ್ಚಿನ ಲಾಭವಾಗದು. ಅದರ ಬದಲು ಮಹಿಳೆಯರಿಗೆ ಮಾಸಿಕ ಆದಾಯ ನೀಡುವ ಹಾಗೂ ಉದ್ಯೋಗ ನೀಡುವ ಯೋಜನೆಗಳನ್ನು ಜಾರಿಗೆ ತರಬೇಕಿತ್ತು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular