ಮೈಸೂರಿನ ವಿಧಾನ ಪರಿಷತ್ ಮಾಜಿ ಸದಸ್ಯ ಸಿ ಸಂದೇಶ್ ನಾಗರಾಜ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ.
ಜೆಡಿಎಸ್ ಪಕ್ಷದ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಚುನಾಯಿತರಾಗಿದ್ದ ಸಂದೇಶ್ ನಾಗರಾಜ್, ಬಳಿಕ ಬಿಜೆಪಿಗೆ ಸೇರ್ಪಡೆಯಾಗಿ ಮತ್ತೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿದೆ.
ಕೊನೆ ಗಳಿಗೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಸ್ಪರ್ಧೆ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಾಜಿನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ.
ಪಕ್ಷ ಸೇರ್ಪಡೆ ಬಗ್ಗೆ ಸಂದೇಶ್ ನಾಗರಾಜ್ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. ವಿಧಾನಸಭಾ ಚುನಾವಣೆ ಹತ್ತಿರುವಂತೆಯೇ ಪಕ್ಷಾಂತರಗಳು ಜೋರಾಗಿಯೇ ನಡೆಯುತ್ತಿವೆ.
ಮೈಸೂರು ಭಾಗದಲ್ಲಿ ಕ್ಷಿಪ್ರಗತಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಬಿಜೆಪಿ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದು ಕೆಲವು ದಿನಗಳ ನಂತರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.