Thursday, November 21, 2024
Google search engine
Homeಮುಖಪುಟಜೆಡಿಎಸ್ ಸೇರಲು ಮುಂದಾಗಿರುವ ಮಾಜಿ ಸಚಿವ ಎ.ಮಂಜು

ಜೆಡಿಎಸ್ ಸೇರಲು ಮುಂದಾಗಿರುವ ಮಾಜಿ ಸಚಿವ ಎ.ಮಂಜು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರ್ಪಡೆಗೆ ಸಿದ್ದತೆ ನಡೆಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಅರಕಲಗೂಡು ಕ್ಷೇತ್ರಕ್ಕೆ ಮಾಜಿ ಸಚಿವ ಎ.ಮಂಜು ಅಭ್ಯರ್ಥಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಅರಕಲಗೂಡು ಕ್ಷೇತ್ರದಲ್ಲಿ ಜಾತ್ಯತೀತ ಜನತಾ ದಳ ಪಕ್ಷದಿಂದ ಎ. ಮಂಜು ಕಣಕ್ಕಿಳಿಯಲಿದ್ದಾರೆ. ಅಲ್ಲದೇ ತಮ್ಮ ಮಗನನ್ನೂ ಜೆಡಿಎಸ್‍ಗೆ ಮಂಜು ಆಹ್ವಾನಿಸಿದ್ದಾರೆ.

ಈ ನಡುವೆ ಶಾಸಕ ಎ.ಟಿ.ರಾಮಸ್ವಾಮಿ ಅವರು ಎಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಅರಸೀಕೆರೆ, ಅರಕಲಗೂಡು ವಿಧಾನಸಭಾ ಕ್ಷೇತ್ರಗಳ ಹಾಲಿ ಶಾಸಕರುಗಳಾದ ಎ.ಟಿ.ರಾಮಸ್ವಾಮಿ ಹಾಗೂ ಕೆ.ಎಂ.ಶಿವಲಿಂಗೇಗೌಡ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular