ತುಮಕೂರು ಜಿಲ್ಲೆಯ ಗುಬ್ಬಿಯ ಬಿದರೆಹಳ್ಳ ಕಾವಲ್ ನಲ್ಲಿ ನಿರ್ಮಾಣಗೊಂಡಿರುವ ಲಘು ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6ರಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಲಿಕಾಪ್ಟರ್ ತಯಾರಿಕಾ ಘಟಕದಿಂದ ಸಾವಿರಾರು ಯುವಕರಿಗೆ ಉದ್ಯೋಗ ಸಿಗುವ ಜೊತೆಗೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ನಡೆಸಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಎಚ್.ಎ.ಎಲ್ ರಕ್ಷಣೆಯಲ್ಲಿ ನಾವು ಸ್ವಾವಲಂಬನೆಯನ್ನು ಸಾಧಿಸಲಿದ್ದೇವೆ. ನಮ್ಮ ರಕ್ಷಣೆಗಾಗಿ ವಿದೇಶಗಳ ಮೇಲಿನ ಅವಲಂಬನೆ ಕಡಿಮೆ ಆಗಲಿದೆ. ಆತ್ಮನಿರ್ಬರ್ ಮೂಲಕ ಹೆಲಿಕಾಪ್ಟರ್ ತಯಾರಿಸಲಾಗುವುದು ಎಂದು ಹೇಳಿದರು.
ಕಳೆದ 9 ವರ್ಷಗಳಲ್ಲಿ ಏರೋಸ್ಪೆಸ್ ಬೆಳವಣಿಗೆಯಾಗಿದೆ. ರಕ್ಷಣಾ ಉಪಕರಣಗಳ ರಫ್ತು ಪ್ರಮಾಣ ಹೆಚ್ಚಾಗಿದೆ. ಆಧುನಿಕ ಅಸಾಲ್ಟ್ ರೈಫಲ್ ಗಳು, ವಿಮಾನ ವಾಹಕ ನೌಕೆ, ಯುದ್ಧ ವಿಮಾನಗಳವರೆಗೂ ದೇಶದಲ್ಲಿಯೇ ತಯಾರಿಸಲಾಗುತ್ತಿದೆ. ದೇಶದಲ್ಲಿಯೇ ರಕ್ಷಣಾ ಉಪಕರಣಗಳನ್ನು ತಯಾರಿಸಲಾಗುತ್ತಿದೆ ಎಂದರು.
ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಬಿ.ಸಿ.ನಾಗೇಶ್, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ಜಗ್ಗೇಶ್ ಮೊದಲಾದವರು ಉಪಸ್ಥಿತರಿದ್ದರು.
All reactions:
11