Monday, December 23, 2024
Google search engine
Homeಮುಖಪುಟಅನೈತಿಕ ಹಾದಿ ಹಿಡಿದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ - ಸಿದ್ದರಾಮಯ್ಯ

ಅನೈತಿಕ ಹಾದಿ ಹಿಡಿದು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ – ಸಿದ್ದರಾಮಯ್ಯ

ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಪಕ್ಷ ಅಧಿಕಾರದಲ್ಲಿದೆ. ಇವರು ಯಾವತ್ತೂ ಕೂಡ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದವರಲ್ಲ. ಎರಡು ಬಾರಿ ಕೂಡ ಆಪರೇಷನ್‌ ಕಮಲದ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಇದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾರೆ. ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲಿ ಆಪರೇಷನ್‌ ಕಮಲ ಎಂಬ ಹೆಸರು ಕೇಳಿರಲಿಲ್ಲ, ರಾಜ್ಯದಲ್ಲಿ ಈ ಆಪರೇಷನ್‌ ಕಮಲ ಆರಂಭವಾದುದ್ದು ಯಡಿಯೂರಪ್ಪ ಮತ್ತು ರೆಡ್ಡಿ ಸಹೋದರರರಿಂದ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಅಳಂದದಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

2018ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಬಹುಮತ ಸಾಬೀತು ಮಾಡಲಾಗದೆ ಮೂರೇ ದಿನಕ್ಕೆ ರಾಜೀನಾಮೆ ನೀಡಿದರು. ನಂತರ ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇಡುವ ಏಕೈಕ ಕಾರಣಕ್ಕೆ ಬರೀ 38 ಸ್ಥಾನಗಳನ್ನು ಗಳಿಸಿದ್ದ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಆದರೆ ವೆಸ್ಟೆಂಡ್‌ ಹೋಟೆಲ್‌ ನಲ್ಲಿ ಉಳಿದುಕೊಂಡು ಸಚಿವರು, ಶಾಸಕರನ್ನು ಭೇಟಿ ಮಾಡದ ಕಾರಣಕ್ಕೆ ಕೇವಲ 14 ತಿಂಗಳಿಗೆ ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು. ಕೊಟ್ಟ ಕುದುರೆ ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ. ಈ ಮಾತು ಕುಮಾರಸ್ವಾಮಿ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ ಎಂದು ದೂರಿದರು.

ಇಂದು ಬೆಲೆಯೇರಿಕೆ ಗಗನ ಮುಟ್ಟಿದೆ. ಹಿಂದೆ 450 ರೂ ಇದ್ದ 50 ಕೆ.ಜಿ ಡಿಎಪಿ ಬೆಲೆ ಇಂದು 1450 ರೂ. ಆಗಿದೆ. ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದುಪ್ಪಟ್ಟು ಮಾಡಿದ್ರಾ? ಮೋದಿಜಿ ಕ್ಯೂ ಜೂಟ್‌ ಬೋಲ್‌ ಲಿಯಾ ಆಪ್? ಎಂದು ಕೇಳಿದೆ. ಈ ಭಾಗದಲ್ಲಿ ಬೆಳೆದ ತೊಗರಿಬೇಳೆಗೆ ನೆಟೆರೋಗ ಬಂದು ಬೆಳೆನಷ್ಟವಾಗಿದೆ. ಈ ಬಗ್ಗೆ ಸದನದಲ್ಲಿ ಕೃಷಿ ಸಚಿವರನ್ನು ರೈತರ ಕಷ್ಟ ಕೇಳಲು ಅವರ ಜಮೀನುಗಳಿಗೆ ಭೇಟಿನೀಡಿದ್ರಾ? ಎಂದು ಕೇಳಿದ್ರೆ ನನಗೆ ಹುಷಾರಿಲ್ಲ, ಅದಕ್ಕೆ ಹೋಗಲಿಲ್ಲ ಎಂದರು. ಆರೋಗ್ಯ ಚನ್ನಾಗಿಲ್ಲ, ಜನರ ಕೆಲಸ ಮಾಡಲು ಆಗಲ್ಲ ಎಂದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಅಲ್ವಾ? ಇವತ್ತಿನವರೆಗೆ ಒಂದು ರೂಪಾಯಿ ಬೆಳೆ ನಷ್ಟ ಪರಿಹಾರ ಕೊಟ್ಟಿಲ್ಲ ಎಂದು ಟೀಕಿಸಿದರು.

ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿರುವಾಗ 72,000 ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಿದ್ರು, ನಾನು ಮುಖ್ಯಮಂತ್ರಿಯಾಗಿರುವಾಗ ರಾಜ್ಯದ 22 ಲಕ್ಷದ 27 ಸಾವಿರ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿದ್ದ 50 ಸಾವಿರ ವರೆಗಿನ 8,165 ಕೋಟಿ ರೂಪಾಯಿ ಸಾಲಮನ್ನಾ ಮಾಡಿದ್ದೆ. ಮೋದಿ ಅವರಾಗಲೀ, ಬೊಮ್ಮಾಯಿ, ಯಡಿಯೂರಪ್ಪ ಅವರಾಗಲೀ ಒಂದು ರೂಪಾಯಿ ಸಾಲಮನ್ನಾ ಮಾಡಿದ್ದಾರ? ಎಂದು ಪ್ರಶ್ನಿಸಿದರು.

ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ಗೊಬ್ಬರ, ಸಿಮೆಂಟ್‌, ಕಬ್ಬಿಣ, ಹಾಲು, ಮೊಸರು, ಔಷಧಿ ಇವುಗಳ ಬೆಲೆ ಮಿತಿಮೀರಿದೆ. ಇದನ್ನೇ ಅಚ್ಚೇದಿನ್‌ ಎಂದು ಕರೆಯಬೇಕಾ ಮೋದಿಜೀ? ಅಗತ್ಯವಸ್ತುಗಳ ಮೇಲೆ ಜಿಎಸ್‌ಟಿ ಹಾಕಿ ಬಡವರ ರಕ್ತ ಹೀರುತ್ತಿದ್ದಾರೆ ಇಂಥವರಿಗೆ ಮತ ಹಾಕ್ತೀರ? ಎಂದು ಕೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular