Thursday, September 19, 2024
Google search engine
Homeಮುಖಪುಟದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ - ಡಿ.ಕೆ.ಶಿವಕುಮಾರ್

ದಾನ, ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ – ಡಿ.ಕೆ.ಶಿವಕುಮಾರ್

ಕಮಲ ಕೆರೆಯಲ್ಲಿದ್ದರೆ ಚೆನ್ನ, ತೆನೆ ಹೊಲದಲ್ಲಿದ್ದರೆ ಚೆನ್ನ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದಕ್ಕಾಗಿ ರಾಜ್ಯದಲ್ಲಿ ಬದಲಾವಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಭದ್ರಾವತಿಯಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು ನಿಮ್ಮ ಹೃದಯದದಲ್ಲಿ ಜಾತ್ಯಾತೀತ ತತ್ವವಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ನಿಮಗೆ ಗೊತ್ತಿದೆ. ಕುಮಾರಣ್ಣ ಏನಾದರೂ ಹೇಳಲಿ. ನೀವು ಕಾಂಗ್ರೆಸ್ ಪಕ್ಷ ಬೆಂಬಲಿಸಿದರೆ ರಾಜ್ಯ, ಎಲ್ಲ ಸಮಾಜದವರು ಉಳಿಯುತ್ತಾರೆ ಎಂದರು.

ಬಿಜೆಪಿಯವರು ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದರು. ಅವರಿಂದ ಮಾಡಲು ಆಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. ಸರ್ಕಾರದ ಎಲ್ಲ ಇಲಾಖೆ ನೇಮಕಾತಿಯಲ್ಲಿ ಅಕ್ರಮ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಭದ್ರಾವತಿ ಪಕ್ಕದ ಕ್ಷೇತ್ರದ ಶಾಸಕ ಈಶ್ವರಪ್ಪ ಅವರು ಗ್ರಾಮೀಣಾಭಿವೃದ್ಧಿ ಮಂತ್ರಿಯಾಗಿದ್ದಾಗ, ಅವರ ಪಕ್ಷದ ಗುತ್ತಿಗೆದಾರರಿಂದಲೇ 40% ಕಮಿಷನ್ ಕೇಳಿದರು. ಅದನ್ನು ನೀಡಲಾಗದೇ ಆತ ನೇಣಿಗೆ ಶರಣಾದ. ನಾವು ವಿಧಾನಸೌಧದಲ್ಲಿ ಹೋರಾಟ ಮಾಡಿದ ನಂತರ ಅವರು ರಾಜೀನಾಮೆ ನೀಡಿದರು. ಮತ್ತೆ ಮಂತ್ರಿಯಾಗಲು ಎಲ್ಲ ಪ್ರಯತ್ನ ಮಾಡಿದರು. ಆ ಮೂಲಕ ಲಂಚಕ್ಕೊಬ್ಬ, ಮಂಚಕ್ಕೊಬ್ಬ ಅಧಿಕಾರ ಕಳೆದುಕೊಂಡರು ಎಂದು ಹೇಳಿದರು.

ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಹೋಗಿರುವ ನಿರ್ಮಲಾ ಸೀತರಾಮನ್ ಅವರು ಕೇಂದ್ರ ಹಣಕಾಸು ಮಂತ್ರಿಯಾಗಿದ್ದಾರೆ. ವಿಶೇಷ ಅನುದಾನದಲ್ಲಿ ರಾಜ್ಯಕ್ಕೆ ಶೂನ್ಯ ಕೊಡುಗೆ ನೀಡಿದ್ದಾರೆ. ಈ ರಾಜ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಮೂರುವರೆ ವರ್ಷಗಳಿಂದ ಬಂದು ಜನರ ಕಷ್ಟ ಕೇಳದ ಪ್ರಧಾನಮಂತ್ರಿಗಳು ಹಾಗೂ ಅಮಿತ್ ಶಾ ಅವರು ಈಗ 15 ದಿನಕ್ಕೊಮ್ಮೆ ಬಂರುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಈ ಡಬಲ್ ಇಂಜಿನ್ ಸರ್ಕಾರ ಯಾರೊಬ್ಬರಿಗೂ ನೆರವು ನೀಡಲಿಲ್ಲ ಎಂದು ಟೀಕಿಸಿದರು.

ಮುಂದಿನ ದಿನಗಳಲ್ಲಿ ಅರಣ್ಯ ಕಾಯ್ದೆ ವಿಚಾರದಲ್ಲಿ ನಮ್ಮ ತೀರ್ಮಾನ ಮಾಡಿ ಯಾರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ. ನಿಮ್ಮೆಲ್ಲರಿಗೂ ರಕ್ಷಣೆ ನೀಡುತ್ತೇವೆ. ನಮ್ಮ ಹೆಗಡೆ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅದರ ಸಲಹೆಯನ್ನು ಆಧರಿಸಿ ನಾವು ನಿಮಗೆ ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವಾಗಲು ಕಾಂಗ್ರೆಸ್ ಪಕ್ಷ 2 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿದ್ದೇವೆ. ಈಗ 200 ಯುನಿಟ್ ವಿದ್ಯುತ್ ಉಚಿತ, ಆಮೂಲಕ ಇನ್ನು ಮುಂದೆ ನೀವು 200 ಯುನಿಟ್ ಒಳಗೆ ವಿದ್ಯುತ್ ಬಳಸಿದರೆ ಯಾರೂ ವಿದ್ಯುತ್ ಬಿಲ್ ಕಟ್ಟುವ ಅಗತ್ಯವಿಲ್ಲ. ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡ್ತೇವೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular