ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಆರ್.ಬಿ. ಸ್ಮೃತಿ ಆಸಿಶ್ ಅಗರ್ವಾಲ್ ಎಂಬ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಯಡಿ ಈ ಏಳು ಮಂದಿಯನ್ನು ಬಂಧಿಸಲಾಗಿದೆ.
ಈ ಏಳು ಜನ ಸೇರಿ ಕಿರು ನಾಟಕ ಪ್ರದರ್ಶಿಸಿದ್ದಾರೆ. ಸೋಮವಾರ ಈ ಏಳು ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾಋಣೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಹೊಸೂರು ಮುಖ್ಯ ರಸ್ತೆಯಲ್ಲಿನ ನಿಮಾನ್ಸ್ ಕನ್ವೆಷನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೈನ್ ಕಾಲೇಜಿನ ವಿದ್ಯಾರ್ಥಿಗಳು ಡಾ.ಬಿ.ಆರ್. ಅಂಬೇಢ್ಕರ್, ದಲಿತರು ಮತ್ತು ಮೀಸಲಾತಿ ಕುರಿತು ಅವಹೇಳನಕಾರಿಯಾಗಿ ಸ್ಕಿಟ್ ಪ್ರದರ್ಶಿಸಿದ್ದರು.
ವಿದ್ಯಾರ್ಥಿಗಳು ಕ್ರಮ ಜರುಗಿಸುವಂತೆ ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯ ಕೇಳಿಬಂದಿತ್ತು. ವಿದ್ಯಾರ್ಥಿಗಳ ಮತ್ತು ಮ್ಯಾನೇಜ್ಮೆಂಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.