ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗುವ ಕಾಲ ಸಮೀಪವಾಗುತ್ತಿದೆ. ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿರುವ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಗೆ ತುದಿಕಾಲ ಮೇಲೆ ನಿಂತಿದ್ದಾರೆ.
ಬಿಜೆಪಿ ಪಕ್ಷದಿಂದ ಎರಡೂ ಕಾಲುಗಳನ್ನು ಹೊರಗೆ ತೆಗೆದಿರುವ ಎಚ್.ವಿಶ್ವನಾಥ್ ಕಾಂಗ್ರೆಸ್ ಮುಖಂಡ ಜೊತೆಯಲ್ಲಿ ಫೋಟೋಗಳಿಗೆ ಪೋಸ್ ನೀಡುತ್ತಿರುವುದು ವಿಶ್ವನಾಥ್ ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಮೈಸೂರಿನಲ್ಲಿ ಫೆಬ್ರವರಿ 16ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಇತರೆ ಮುಖಂಡರು ಕೆ.ಆರ್. ನಗರದಲ್ಲಿರುವ ಮಾಜಿ ಸಚಿವ ಎಚ್.ವಿಶ್ವನಾಥ್ ಅವರ ಮನೆಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದು ಎಲ್ಲರ ಕುತೂಹಲಕ್ಕೆ ಕಾಋಣವಾಗಿದೆ.
ಎಚ್.ವಿಶ್ವನಾಥ್ ಅವರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಎಚ್.ಸಿ. ಮಹದೇವಪ್ಪ, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್ ಮೊದಲಾದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.