Thursday, November 21, 2024
Google search engine
Homeಮುಖಪುಟಹತ್ಯೆಗೆ ಕರೆ ನೀಡಿರುವ ಸಚಿವರನ್ನು ಸಂಪುಟದಿಂದ ಕಿತ್ತು ಹಾಕಿ - ಸಿದ್ದರಾಮಯ್ಯ ಆಗ್ರಹ

ಹತ್ಯೆಗೆ ಕರೆ ನೀಡಿರುವ ಸಚಿವರನ್ನು ಸಂಪುಟದಿಂದ ಕಿತ್ತು ಹಾಕಿ – ಸಿದ್ದರಾಮಯ್ಯ ಆಗ್ರಹ

ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಜನತೆಯ ಮಾನ-ಪ್ರಾಣ ರಕ್ಷಣೆಯ ಹೊಣೆ ಸರ್ಕಾರದ್ದಾಗಿದೆ. ಇಂತಹ ಸಚಿವರು ತಾವೇ ಖುದ್ದಾಗಿ ಹತ್ಯೆಗೆ ಪ್ರಚೋದಿಸಿದರೆ? ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಇರುತ್ತದೆ? ಇದು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರ ಗಮನಕ್ಕೆ ಬಂದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕೊಲೆಗಡುಕ ಮನಸ್ಥಿತಿಯ ಡಾ.ಅಶ್ವಥ್ ನಾರಾಯಣ್ ಅಂತಹವರು ಸಾರ್ವಜನಿಕ ಜೀವನದಲ್ಲಿ ಇರಲಿಕ್ಕೆ ನಾಲಾಯಕ್. ಇಂತಹವರು ಉನ್ನತ ಶಿಕ್ಷಣ ಸಚಿವರಾದರೇ? ಬಿಜೆಪಿ ಸಮಾಜಕ್ಕೆ ಯಾವ ಸಂದೇಶ ಕೊಡಲಿಕ್ಕೆ ಹೊರಟಿದೆ? ಎಂದು ಕೇಳಿದ್ದಾರೆ.

ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು ಎಂದು ಆರೋಪಿಸಿದರು.

ಸಾವಿನ ಭಯ ನನಗಿಲ್ಲ. ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿ ಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular