Friday, October 18, 2024
Google search engine
Homeಆರ್ಥಿಕಬಿಜೆಪಿ ಸರ್ಕಾರದ ನಿರ್ಗಮನ ಬಜೆಟ್ - ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಬಿಜೆಪಿ ಸರ್ಕಾರದ ನಿರ್ಗಮನ ಬಜೆಟ್ – ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಇದು ಬಿಜೆಪಿ ಸರ್ಕಾರದ ಚುನಾವಣಾ ಬಜೆಟ್‌. ಇನ್ನು 2 ತಿಂಗಳಲ್ಲಿ ಚುನಾವಣೆ ಇರುವುದರಿಂದ ಇದನ್ನು ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್‌ ಎನ್ನಬಹುದು. ಇದರಲ್ಲಿನ ಯಾವೊಂದು ಯೋಜನೆಗಳನ್ನು ಜಾರಿ ಮಾಡುವ ಇಚ್ಛಾಶಕ್ತಿಯಾಗಲೀ, ಬದ್ಧತೆಯಾಗಲೀ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್‌ ಗಾತ್ರ 3,09,182 ಕೋಟಿ ಇದೆ. ಕಳೆದ ಬಜೆಟ್‌ ನಲ್ಲಿ 206 ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದರು, ಅದರಲ್ಲಿ 56 ಕಾರ್ಯಕ್ರಮಗಳ ಅನುಷ್ಠಾನವನ್ನೇ ಮಾಡಿಲ್ಲ. 2018ರಲ್ಲಿ ಬಿಜೆಪಿ ಪಕ್ಷ ರಾಜ್ಯದ ಜನರಿಗೆ ಪ್ರಣಾಳಿಕೆ ಮೂಲಕ 600 ಭರವಸೆಗಳನ್ನು ನೀಡಿತ್ತು, ಇದರಲ್ಲಿ 90% ಭರವಸೆಗಳನ್ನು ಈಡೇರಿಸಿಲ್ಲ. ನಮ್ಮ ಸರ್ಕಾರದ ಕೊನೆಯ ಬಜೆಟ್‌ ನಲ್ಲಿ 5 ವರ್ಷದಲ್ಲಿ ನಮ್ಮ ಸರ್ಕಾರದ ಸಾಧನೆಗಳೇನು ಮತ್ತು ಮುಂದೆ ಅಧಿಕಾರಕ್ಕೆ ಬಂದಾಗ ಏನೇನು ಮಾಡುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದ್ದೆವು, ಆದರೆ ಈ ಬಜೆಟ್‌ ಪುಸ್ತಕದಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಮಾಹಿತಿಯೇ ಇಲ್ಲ ಎಂದು ಆರೋಪಿಸಿದರು.

ಬಜೆಟ್‌ ಗಾತ್ರ 3 ಲಕ್ಷದ 9ಸಾವಿರ ಕೋಟಿ ಇದ್ದರೂ ಈ ಯೋಜನೆಗೆ ನೀಡಿರುವ ಅನುದಾನ 30,000 ಕೋಟಿಯೇ ಇದೆ. ಹಿಂದಿನ ವರ್ಷ ಖರ್ಚಾಗಿರುವ ಹಣವನ್ನೂ ಹೇಳಿಲ್ಲ, ನನ್ನ ಪ್ರಕಾರ ಈ ಯೋಜನೆಗೆ ನೀಡುವ ಅನುದಾನ ಕನಿಷ್ಠ 50,000 ಕೋಟಿ ರೂ. ಆಗಬೇಕಿತ್ತು. ಇದು ದಲಿತರಿಗೆ, ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಮಾಡಿರುವ ದೊಡ್ಡ ದ್ರೋಹ ಎಂದು ದೂರಿದರು.

ಈ ವರ್ಷದ ಅಂತ್ಯಕ್ಕೆ 5,64,896 ಕೋಟಿ ರೂ. ಸಾಲ ಆಗುತ್ತದೆ ಎಂದು ಹೇಳಿದ್ದಾರೆ. ಅಂದರೆ ಈಗ 3 ಲಕ್ಷದ 22 ಸಾವಿರ ಕೋಟಿ ಸಾಲ ಹೆಚ್ಚಾಗಿದೆ. 2018-19ರಲ್ಲಿ ಸಮ್ಮಿಶ್ರ ಸರ್ಕಾರ ಮಾಡಿದ್ದ ಸಾಲ 41,914 ಕೋಟಿ ರೂ. ಇದನ್ನು ಬಿಟ್ಟರೆ ಉಳಿದ ನಾಲ್ಕು ವರ್ಷದಲ್ಲಿ ಬಿಜೆಪಿ ಸರ್ಕಾರ 2,54,760 ಕೋಟಿ ರೂ. ಸಾಲ ಮಾಡಿದೆ. ನಮ್ಮ 5 ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ 1,16,512 ಕೋಟಿ ರೂ ಎಂದು ಅಂಕಿ ಅಂಶಗಳ ಸಹಿತ ವಿವರ ನೀಡಿದ್ದಾರೆ.

ಇಲ್ಲಿ ಘೋಷಣೆ ಮಾಡಿರುವ ಯಾವ ಯೋಜನೆಯನ್ನು ಕೂಡ ಜಾರಿ ಮಾಡುವ ಬದ್ಧತೆ ಸರ್ಕಾರಕ್ಕಿಲ್ಲ. ಚುನಾಯಿತ ಸರ್ಕಾರಗಳು ಪಾರದರ್ಶಕವಾಗಿ ಮತ್ತು ಉತ್ತರದಾಯಿಯಾಗಿರಬೇಕು. ಮತದಾರರಿಂದ ಯಾವುದನ್ನೂ ಮುಚ್ಚಿಡಲು ಹೋಗಬಾರದು. ಈ ಬಜೆಟ್ ನಲ್ಲಿ ಜನರಿಂದ ಮಾಹಿತಿಯನ್ನು ಮುಚ್ಚಿಡಲಾಗಿದೆ ಎಂದು ಆರೋಪಿಸಿದರು.

ಇಂದು ಇಷ್ಟೊಂದು ಸಾಲ ಆಗಲು ಕೇಂದ್ರ ಸರ್ಕಾರದಿಂದ ಬರುತ್ತಿರುವ ಅನುದಾನ ಕಡಿಮೆಯಾಗುತ್ತಿರುವುದು ಕಾರಣ. ನಮ್ಮ ತೆರಿಗೆ ಪಾಲು, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಕೇಂದ್ರದ ಪಾಲು ಕಡಿಮೆಯಾದದ್ದು ಹಾಗೂ ಕೇಂದ್ರದಿಂದ ಬರುವ ಆರ್ಥಿಕ ನೆರವಿನ ಪ್ರಮಾಣ ಇಳಿಕೆಯಾಗಿರುವುದರಿಂದ ಸುಮಾರು 80,000 ಕೋಟಿಯಷ್ಟು ಸಾಲ ಮಾಡಬೇಕಾಗಿದೆ ಎಂದರು.

ಮಜ್ಜಿಗೆ, ಮೊಸರು, ಅಕ್ಕಿ, ಗೋದಿ, ಮಂಡಕ್ಕಿ, ಪೆನ್ನು, ಪೆನ್ಸಿಲ್‌ ಮೇಲೆ ತೆರಿಗೆ ಹಾಕಿರುವುದರಿಂದ ತೆರಿಗೆ ಸಂಗ್ರಹ ಜಾಸ್ತಿಯಾಗಿದೆ. ಈ ಮೊದಲು ಇವುಗಳ ಮೇಲೆ ಶೂನ್ಯ ತೆರಿಗೆ ಇತ್ತು, ಇದನ್ನು 5 ರಿಂದ 18ರ ವರೆಗೆ ಏರಿಸಿದ್ದಾರೆ. ಜನರ ಮೇಲೆ ತೆರಿಗೆ ಹೆಚ್ಚು ಮಾಡಿರುವುದರಿಂದ ಸಂಗ್ರಹವಾದ ಹಣ ಕೇಂದ್ರ ಸರ್ಕಾರಕ್ಕೆ ಹೋಗುತ್ತದೆ, ಅದರಿಂದ ನಮಗೇನು ಲಾಭ? ಎಂದು ಪ್ರಶ್ನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular