ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಅವರ ಪ್ರಕರಣದ ಕುರಿತು ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಲಿಖಿತವಾದ ನಿರ್ದೇಶನಗಳನ್ನು ನೀಡಿದ್ದಾರೆ. ನಿನ್ನೆಯ ದಿನ ಖುದ್ದಾಗಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದಿದ್ದಾರೆ.
ಅಧಿಕಾರಿಗಳ ನೀತಿ ಸಂಹಿತೆಯ ಪ್ರಕಾರ ಅಧಿಕಾರಿಗಳ ನಡವಳಿಕೆ ಹಾಗೂ ಅದರಂತೆ ನಡೆದುಕೊಳ್ಳದಿದ್ದಾಗ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳಬಹುದಾದ ಶಿಸ್ತಿನ ಕ್ರಮಗಳನ್ನು ಮುಖ್ಯಕಾರ್ಯದರ್ಶಿಗಳು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.