ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಾವಗಡ ಕ್ಷೇತ್ರದಲ್ಲಿ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಆಗ್ರಹಿಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ನಡೆದ ಮಾದಿಗ ಸಮುದಾಯದ ಮುಖಂಡರ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ಪಾವಗಡ ಮತ್ತು ಕೊರಟಗೆರೆ ಮೀಸಲು ಕ್ಷೇತ್ರಗಳಾಗಿವೆ. ಪಾವಗಡದಲ್ಲಿ ಮಾದಿಗ ಸಮುದಾಯದ ಮತದಾರರೇ ಹೆಚ್ಚಾಗಿದ್ದಾರೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಪಾವಗಡದಲ್ಲಿ ಮಾದಿಗ ಸಮುದಾಯದ ಒಬ್ಬರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಪಾವಗಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಡಾ.ಅರುಂಧತಿ, ಪಾವಗಡದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶಗಳು ಕಡಿಮೆಯಾಗಿವೆ. ಈ ಬಾರಿ ನಮ್ಮಲ್ಲಿ ಯಾರಿಗಾದರೂ ಒಬ್ಬರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.


