Friday, September 20, 2024
Google search engine
Homeಮುಖಪುಟಎಚ್3ಎನ್2 ವೈರಸ್ - ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ - ಸಚಿವ ಡಾ.ಕೆ.ಸುಧಾಕರ್

ಎಚ್3ಎನ್2 ವೈರಸ್ – ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ – ಸಚಿವ ಡಾ.ಕೆ.ಸುಧಾಕರ್

ಎಚ್3ಎನ್2 ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಎಚ್‌3ಎನ್‌2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಚಿವರು ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲ ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019 ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ವಿಕ್ಟೋರಿಯಾ ಹಾಗೂ ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಇನ್ಪೆಕ್ಷನ್ಸಾ ಹಾಗೂ ಐಎಲ್‌ಐ ಪ್ರಕರಣಗಳ ಪೈಕಿ 25 ಮಂದಿಗೆ ಈ ಪರೀಕ್ಷೆ ಮಾಡಿ ಯಾವ ಪ್ರಭೇದದ ವೈರಾಣು ಎಂದು ಪತ್ತೆ ಮಾಡಲಾಗುವುದು ಎಂದರು.

15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡುಬರಬಹುದು. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ, ಗುಂಪುಗೂಡುವುದನ್ನು ತಡೆಯುವುದು, ಕೈಗಳ ಸ್ವಚ್ಛತೆ ಮೊದಲಾದ ಕ್ರಮಗಳ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಎಂದರು.

ಬೇಸಿಗೆಯ ಆರಂಭಕ್ಕೆ ಮುನ್ನವೇ ಫೆಬ್ರವರಿಯಲ್ಲೇ ತಾಪಮಾನ ಹೆಚ್ಚಾಗಿದೆ. ಇದರಿಂದ ಸಮಸ್ಯೆ ಹೆಚ್ಚುತ್ತಿದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಲ್ಲಿ ಓಡಾಡುವುದು ತಪ್ಪಿಸಬೇಕು. ಕನಿಷ್ಠ 2-3 ಲೀಟರ್‌ ನೀರು, ಮಜ್ಜಿಗೆ, ಎಳನೀರು, ಶರಬತ್‌ ಕುಡಿಯುವುದೊಳಿತು. ದೇಹದಲ್ಲಿ ನೀರು ಕಡಿಮೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಈ ಸೋಂಕು ಬಂದರೆ 2-5 ದಿನದೊಳಗೆ ನಿವಾರಣೆಯಾಗುತ್ತದೆ. ಕೋವಿಡ್‌ಗೊಳಗಾದವರಿಗೆ ಸೋಂಕು ಬಂದರೆ ಹೆಚ್ಚು ಕೆಮ್ಮು ಇರುತ್ತದೆ. ಬೆಂಗಳೂರಿನಲ್ಲಿ ಈ ಸೋಂಕಿನ ಎರಡು ಪ್ರಕರಣಗಳು ಕಂಡುಬಂದಿವೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular