Thursday, September 19, 2024
Google search engine
Homeಮುಖಪುಟಜೆಡಿಎಸ್, ಬಿಜೆಪಿಯಿಂದ ಹಲವು ಮುಖಂಡರು ಕಾಂಗ್ರೆಸ್ ಗೆ ಬರ್ತಾರೆ - ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿಕೆ

ಜೆಡಿಎಸ್, ಬಿಜೆಪಿಯಿಂದ ಹಲವು ಮುಖಂಡರು ಕಾಂಗ್ರೆಸ್ ಗೆ ಬರ್ತಾರೆ – ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿಕೆ

ಬಿಜೆಪಿಯ 4 ಜನ ಸಚಿವರು, ನಾಲ್ವರು ಶಾಸಕರು ಮತ್ತು ಜೆಡಿಎಸ್ ಶಾಸಕರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಕೆಲವರು ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ರೀತಿಯ ಷರತ್ತುಗಳನ್ನು ಹಾಕದೇ ಅವರನ್ನ ಪಕ್ಷಕ್ಕೆ ಬರುವಂತೆ ಸೂಚಿಸಲಾಗಿದೆ. ಪಕ್ಷಕ್ಕೆ ಕರೆ ತರಬೇಕೋ ಇಲ್ಲವೋ ಎಂಬುದನ್ನು ಪಕ್ಷ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.

ಬಿಜೆಪಿ ನಾಯಕರು ಮನ ಬಂದಂತೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಮೈಸೂರಿನಲ್ಲಿ ಹುಚ್ಚುಚ್ಚಾಗಿ ಮಾತನಾಡಿದ್ದಾರೆ‌. ಪತ್ರಕರ್ತರು ಕೇಳಿದ ಪ್ರಶ್ನೆಗೂ ಸಮರ್ಪಕ ಉತ್ತರ ನೀಡಲಿಲ್ಲ ಎಂದು ಎಂ.ಲಕ್ಷ್ಮಣ್ ಟೀಕಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಕೇವಲ ಒಂದು ಲಕ್ಷ ಹಣ ಪಡೆಯುವಾಗ ಸಿಕ್ಕಿ ಬಿದ್ದರೆಂಬ ಕಾರಣಕ್ಕೆ ಶಿಸ್ತು ಕ್ರಮ ಕೈಗೊಳ್ಳಲಾಗಿತ್ತು. ಅವರನ್ನು ಬಿಜೆಪಿಯವರೇ ಸಿಲುಕಿಸಿ ದಲಿತರೆಂಬ ಕಾರಣಕ್ಕೆ ಅವರ ವಿರುದ್ಧ ಕ್ರಮ ಕೈಗೊಂಡರು ಎಂದರು.

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪ್ರಕರಣದಲ್ಲಿ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅವರ ಪುತ್ರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಆದರೂ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಬಿಜೆಪಿ ಯಾವುದೇ ಕ್ರಮ ಕೈಗೊಂಡಿಲ್ಲ. ಈ ವಿಚಾರದಲ್ಲಿ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡ್ತಿದ್ದಾರೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫಿ, ಟೀ, ಬಿಸ್ಕೆಟ್‌ಗೆ 200 ಕೋಟಿ ಖರ್ಚು ಮಾಡಲಾಗಿದೆ ಎಂದು ಆರೋಪಿಸುವ ಬಿಜೆಪಿಯ ಮಾಜಿ ಕಾರ್ಪೋರೇಟರ್‌ ಎನ್.ಆರ್ ರಮೇಶ್ ಸೂಕ್ತ ದಾಖಲೆ ಬಿಡುಗಡೆ ಮಾಡಬೇಕು. ಈ ಬಗ್ಗೆ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ದಾಖಲೆಗಳಿಲ್ಲದಿದ್ದರೂ ಸಿದ್ದರಾಮಯ್ಯ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡ್ತಿದಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular