ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ಕೊಟ್ಟಿಗೆಗೆ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ 16 ಮೇಕೆಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವ ಮೇಕೆಗಳು ಬೂದಿಬೆಟ್ಟ ಗ್ರಾಮದ ಬಂಗಾರಪ್ಪ ಎಂಬುವರಿಗೆ ಸೇರಿದವು ಎಂದು ತಿಳಿದುಬಂದಿದೆ. ಬೆಂಕಿಯಲ್ಲಿ 50 ಸಾವಿರ ರೂಪಾಯಿ ಭಸ್ಮವಾಗಿದೆ ಎಂದು ಹೇಳಲಾಗಿದೆ.
ಬೆಂಕಿ ಬಿದ್ದ ಕೂಡಲೇ ಎಚ್ಚೆತ್ತುಕೊಂಡ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು ಮೇಕೆಗಳನ್ನು ಉಳಿಸಿಕೊಳ್ಳಲು ಆಗಿಲ್ಲ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು ಪ್ರಕರಣ ದಾಖಲಾಗಿದೆ.