2022-2023ನೇ ಸಾಲಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಹೈಕೋರ್ಟ್ ದ್ವಿಸದಸ್ಯ ಪೀಠ ಆದೇಶಿಸಿದೆ. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಏಕ ಸದಸ್ಯ ಪೀಠ ಈ ಹಿಂದೆ ಹೈಕೋರ್ಟ್ ನ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.
5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಷರತ್ತುಬದ್ದ ಅನುಮತಿ ನೀಡಿದೆ. ಈ ಮೂಲಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದು ಯಾವುದೇ ವಿದ್ಯಾರ್ಥಿಯನ್ನು ಫೇಲು ಮಾಡುವಂತಿಲ್ಲ ಎಂದು ಆದೇಶಿಸಿದೆ.
ಹೈಕೋರ್ಟ್ ನ ವಿಭಾಗೀಯ ಪೀಠ ಷರತ್ತುಬದ್ದ ಆದೇಶ ನೀಡಿದ್ದು 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮಾರ್ಚ್ 27ರಿಂದ ಆರಂಭಿಸುವಂತೆ ಸೂಚಿಸಿದೆ.
ಸರ್ಕಾರ ಹಾಗು ಪ್ರತಿವಾದಿಗಳ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಪೀಠ ಮಾರ್ಚ್ 13 ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.
ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕೆಂಬ ಸರ್ಕಾರದ ಮಧ್ಯಂತರ ಮನವಿಯ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿತು. ಅಲ್ಲದೆ ಉದ್ದೇಶಿತ ಪರೀಕ್ಷೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸುವಂತೆಯೂ ಹೈಕೋರ್ಟ್ ಸೂಚನೆ ನೀಡಿತ್ತು.