ವಿಜಯ ಸಂಕಲ್ಪ ಯಾತ್ರೆಗೆ ಫ್ಲಕ್ಸ್ ಕಟ್ಟುವ ವಿಚಾರದಲ್ಲಿ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ನಡುವೆ ಗಲಾಟೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.
ಕೊರಟಗೆರೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ಅನಿಲ್ ಕುಮಾರ್ ಮತ್ತು ಲಕ್ಷ್ಮೀಕಾಂತ್ ನಡುವೆ ಮಾರಾಮಾರಿ ನಡೆದಿದೆ. ಸ್ಥಳೀಯ ಮುಖಂಡರಾದ ಲಕ್ಷ್ಮೀಕಾಂತ್ ಮೇಲೆ ಹೊರಗಿನಿಂದ ಬಂದಿರುವ ಅನಿಲ್ ಕುಮಾರ್ ಹಲ್ಲೆ ಮಾಡಲು ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಗಳ ಭೇಟಿಗೂ ಮುನ್ನವೇ ಕೊರಟಗೆರೆ ಕ್ಷೇತ್ರದಲ್ಲಿ ಭಿನ್ನಮತ ಸ್ಪೋಟವಾಗಿದ್ದು ಅನಿಲ್ ಕುಮಾರ್ ಮತ್ತು ಲಕ್ಷ್ಮೀಕಾಂತ್ ನಡುವೆ ವಾಗ್ವಾದ ನಡೆದಿದೆ. ಇಬ್ಬರು ಟಿಕೇಟ್ ಆಕಾಂಕ್ಷಿಗಳ ಕಿತ್ತಾಡಿಕೊಂಡಿದ್ದಾರೆ.
ಕೊರಟಗೆರೆ ಪಟ್ಟಣದ ಹೊರವಲಯದ ಬೈಪಾಸ್ ಬಳಿ ಈ ಘಟನೆ ನಡೆದಿದ್ದು ಇನ್ನು ಟಿಕೆಟ್ ಕೊಡುವುದಕ್ಕೂ ಮೊದಲ ಲಕ್ಷ್ಮೀಕಾಂತ್ ಮತ್ತು ಅನಿಲ್ ಕುಮಾರ್ ನಡುವೆ ಜಟಾಪಟಿ ನಡೆದಿದೆ.
ವಿಜಯಸಂಕಲ್ಪ ಯಾತ್ರೆಗೆ ಬರುತ್ತಿರುವ ಮುಖ್ಯಮಂತ್ರಿಗಳ ಸ್ವಾಗತಕ್ಕೆ ಕಟ್ಟಿದ್ದ ಫ್ಲೆಕ್ಸ್ ಗಳನ್ನು ಕಿತ್ತುಹಾಕಿರುವುದು ಈ ಮಾತಿನ ಚಕಮಕಿಗೆ ಕಾರಣವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮೊದಲೇ ಪೊಲೀಸರು ಮಧ್ಯಪ್ರವೇಶ ಮಾಡಿ ಗಲಾಟೆಯನ್ನು ನಿಯಂತ್ರಿಸಿದ್ದಾರೆ.