ನಾನು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಕ್ಷದ ಹೈಕಮಾಂಡ್ ಎಲ್ಲಿ ಸ್ಪರ್ಧಿಸಬೇಕೆಂದು ತೀರ್ಮಾನಿಸುತ್ತದೋ ಅಲ್ಲಿಂದ ಸ್ಪರ್ಧಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಯಾರಿಗೆ ಟಿಕೆಟ್ ನೀಡಬೇಕೆಂಬುದನ್ನು ನಿನ್ನೆ ನಡೆದ ಪಕ್ಷದ ಸಭೆಯಲ್ಲಿ ತೀರ್ಮಾನಿಸಿದ್ದು ಯುಗಾದಿ ಹಬ್ಬದಂದು ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.