Thursday, December 26, 2024
Google search engine
Homeಮುಖಪುಟಪ್ರತಿಯೊಬ್ಬರಿಗೂ ವಿಜ್ಞಾನದ ಜ್ಞಾನ ಅಗತ್ಯ - ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಯೊಬ್ಬರಿಗೂ ವಿಜ್ಞಾನದ ಜ್ಞಾನ ಅಗತ್ಯ – ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಯೊಬ್ಬರೂ ಸೈನ್ಸ್ ಗ್ಯಾಲರಿ ಪ್ರವೇಶಿಸಿ ವಿಜ್ಞಾನದ ಜ್ಞಾನ ಪಡೆದು ಹೊರಹೋಗುವಂತಾಗಬೇಕು. ಇದಕ್ಕೆ ರಾಜ್ಯ ಸರ್ಕಾರ ಎಲ್ಲಾ‌‌ ಸಹಕಾರ, ಬೆಂಬಲ ‌ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ಸೈನ್ಸ್ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು. ತತ್ವಶಾಸ್ತ್ರ,ಆಧ್ಯಾತ್ಮ ಎಲ್ಲದರಲ್ಲೂ ವಿಜ್ಞಾನದ ಅಂಶಗಳು ಹೆಚ್ಚಾಗಿದೆ. ವಿಜ್ಞಾನದಲ್ಲಿ ಸಂಶೋಧನೆಗೆ ಇನ್ನೂ ಸಾಕಷ್ಟು ಅವಕಾಶಗಳಿವೆ ಎಂದು ಹೇಳಿದರು.

ಮಾನವನ ಮೆದುಳು ಇನ್ನೂ 75ರಷ್ಟು ವಿಸ್ಕೃತವಾಗಬೇಕಿದೆ. ಕೇವಲ 25ರಷ್ಟು ಮೆದುಳುನ್ನು ಬಳಸಿಕೊಂಡು ಮನುಷ್ಯ ಇಷ್ಟೆಲ್ಲಾ ಅದ್ಭುತ ಸೃಷ್ಟಿ ಮಾಡಿದ್ದಾನೆ. ಶೇ 100ರಷ್ಟು ಮೆದುಳನ್ನು ಮನುಷ್ಯ ಉಪಯೋಗಿಸಿದರೆ ಏನೆಲ್ಲಾ‌ ಸೃಷ್ಟಿಸಬಹುದು ತಿಳಿಸಿದರು.

ಸೈನ್ಸ್ ಗ್ಯಾಲರಿ ಕೂಡ ಅದೇ ನಿಟ್ಟಿನಲ್ಲಿ ಕೆಲಸ ಮಾಡಬೇಕು. ವ್ಯಕ್ತಿಯ ವೈಯಕ್ತಿಕ ವಿಕಸನಕ್ಕೆ ಸಹಾಯವಾಗಬೇಕು. ಆರ್ ಎನ್ ಡಿ ಇಕೋ‌ ಸಿಸ್ಟಮ್, ಏರೋಸ್ಪೇಸ್ ಎಲ್ಲದರಲ್ಲೂ ಕೂಡ ರಾಜ್ಯ ಮುಂಚೂಣಿಯಲ್ಲಿದೆ. ಆರ್ ಎನ್ ಡಿ ನೀತಿ ರೂಪಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular