ರಾಜಭವನದ ಗಾಜಿನ ಮನೆಯಲ್ಲಿ ಆಗಸ್ಟ್ 4ರ ಮಧ್ಯಾಹ್ನ 2.15 ನಿಮಿಷಕ್ಕೆ ಆರಂಭವಾದ ಸರಳ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಬಂದ ಶಾಸಕರ ಹೆಸರನ್ನು ಕೂಗಿದಾಗ ಬೆಂಬಲಿಗರು ಕೇಕೆ ಹಾಕುತ್ತ ಭಾರತ್ ಮಾತಾ ಕಿ ಜೈ ಎಂದು ಕೂಗುತ್ತಾ ಸಂಭ್ರಮಿಸಿದರು.
ಮೊದಲಿಗೆ ಹಿರಿಯ ಶಾಸಕರಾದ ಗೋವಿಂದ ಕಾರಜೋಳ ಅವರು ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರತಿಯೊಬ್ಬರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ಡಾ. ಅಶ್ವತ್ಥನಾರಾಯಣ, ಚಂದ್ರಕಾಂತ್ ಪಾಟೀಲ್,ಆನಂದ್ ಸಿಂಗ್, ಕೋಟಾ ಶ್ರೀನಿವಾಸ ಪೂಜಾರಿ (ವಿಧಾನ ಪರಿಷತ್ ಸದಸ್ಯ), ಪ್ರಭುಚೌಹಾಣ್, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಸುನಿಲ್ ಕುಮಾರ್, ಆಚಾರ್ ಹಾಲಪ್ಪ, ಶಂಕರ್ ಮುನವಳ್ಳಿ, ಬಿ.ಸಿ.ನಾಗೇಶ್
ವಲಸಿಗರಾದ ಹೆಬ್ಬಾರ್ ಶಿವರಾಂ, ಎಚ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್, ಭೈರತಿ ಬಸವರಾಜು, ಡಾ.ಕೆ.ಸುಧಾಕರ್, ಕೆ. ಗೋಪಾಲಯ್ಯ, ಎಂಟಿಬಿ ನಾಗರಾಜು, ನಾರಾಯಣಗೌಡ, ಮುನಿರತ್ನ ಸಚಿವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕೊನೆಗೂ ಸಚಿವ ಸ್ಥಾನ ಇಲ್ಲ
ಮಹಿಳಾ ಖೋಟಾದಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿತ್ತು. ಮಾಧ್ಯಮಗಳಲ್ಲೂ ಪ್ರಕಟವಾಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ತಪ್ಪಿ ಹೋಗಿದೆ.
ಮುಖ್ಯಮಂತ್ರಿ ಸ್ಥಾನದ ಕನಸುಗಳನ್ನು ಹೊತ್ತು ದಹಲಿಯ ಬಿಜೆಪಿ ಹೈಕಮಾಂಡ್ ಮತ್ತು ಆರ್.ಎಸ್.ಎಸ್. ಮುಖಂಡರನ್ನು ಭೇಟಿ ಭಾರಿ ಸದ್ದು ಮಾಡಿದ್ದ ಚಂದ್ರಕಾಂತ್ ಬೆಲ್ಲದ್ ಅವರಿಗೆ ಸಚಿವ ಸ್ಥಾನವೂ ದೊರೆತಿಲ್ಲ.
ಯಡಿಯೂರಪ್ಪ ವಿರುದ್ದ ಗುಡುಗಿದವರಿಗೂ ನಿರಾಸೆ
ಮುಖ್ಯಮಂತ್ರಿ ಬದಲಾವಣೆ ಆಗಲೇ ಬೇಕು ಎಂದು ಪಟ್ಟು ಹಿಡಿದಿದ್ದ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಸಚಿವರಾಗುವ ಆಸೆ ಈಡೇರದೆ ತೀವ್ರ ನಿರಾಸೆಗೊಳಗಾಗಿದ್ದಾರೆ.
ಸಚಿವ ಸ್ಥಾನ ವಂಚಿತ 13 ಜಿಲ್ಲೆಗಳು
ಬಳ್ಳಾರಿ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ರಾಮನಗರ, ಕೊಡಗು, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆತಿಲ್ಲ. ಹಾಗಾಗಿ