Monday, September 16, 2024
Google search engine
Homeಮುಖಪುಟಪತಿಯ ಮನೆ ಮುಂದೆ ಮಾಟ ಮಾಡಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಮಹಿಳೆ

ಪತಿಯ ಮನೆ ಮುಂದೆ ಮಾಟ ಮಾಡಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಮಹಿಳೆ

ನಿನ್ನೆ ಅಮಾವಾಸ್ಯೆ ದಿನ ಪತಿಯ ಮನೆ ಮುಂದೆ ಹೆಂಡತಿ ಮಾಟ ಮಂತ್ರ ಮಾಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು ಮಹಿಳೆಯನ್ನು ಸಾರ್ವಜನಿಕರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.

ಮೈಸೂರಿನ ನಾಚನಹಳ್ಳಿ ಪಾಳ್ಯದ 8ನೇ ಕ್ರಾಸ್‌ನಲ್ಲಿ ಸಮ್ರೀನ್ ಎಂಬ ಮಹಿಳೆ ತನ್ನ ಪತಿ ರಫಿ ಮನೆ ಮುಂದೆ ಮಾಟ ಮಾಡಿಸಿದ್ದಾಳೆ. ಪತಿಯ ಮನೆ ಮುಂದೆ ಮಡಿಕೆ, ನಿಂಬೆಹಣ್ಣು, ಮೆಣಸಿನಕಾಯಿ, ಉಪ್ಪು ಸೇರಿ ಹಲವು ವಸ್ತುಗಳನ್ನು ಹಾಕಲು ಬಂದಿದ್ದಾಗ ಸಾರ್ವಜನಿಕರು ಮಹಿಳೆಯನ್ನು ಹಿಡಿದಿದ್ದಾರೆ.

ಕೆಲವು ದಿನಗಳಿಂದ ಪತಿಯಿಂದ ದೂರವಾಗಿದ್ದ ಸಮ್ರೀನ್, ಪ್ರತಿ ಅಮಾವಾಸ್ಯೆ ದಿನ ರಫೀ ಮನೆ ಮುಂದೆ ಮಾಟ ಮಂತ್ರ ಮಾಡಿಸುತ್ತಿದ್ದರು ಎಂದು ಸುದ್ದಿ ಟಿವಿಯ ಫೇಸ್ ಬುಕ್ ಪೇಜಿನಲ್ಲಿ ಬರೆದುಕೊಳ್ಳಲಾಗಿದೆ.

ಪ್ರತಿ ಅಮಾವಾಸ್ಯೆಯಂದು ರಫಿ ಮನೆ ಮುಂದೆ ಮಾಟ ಮಂತ್ರದ ವಸ್ತುಗಳು ಬಿದ್ದಿರುತ್ತಿದ್ದವು. ಮಾರ್ಚ್ 21 ರಾತ್ರಿ ಮಾಟ ಮಂತ್ರದ ವಸ್ತುಗಳನ್ನು ಹಾಕುವಾಗ ರೆಡ್ ಹ್ಯಾಂಡ್ ಆಗಿ ಸಮ್ರೀನ್‌ಳನ್ನು ಹಿಡಿದಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular