ಅಬಕಾರಿ ನೀತಿ ವಿಚಾರದಲ್ಲಿ ಉದ್ಭವಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಅವರನ್ನು ದೆಹಲಿ ನ್ಯಾಯಾಲಯ ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ ಪಾಲ್ ಅವರು ಹಿರಿಯ ಎಎಪಿ ನಾಯಕರನ್ನು ಏಪ್ರಿಲ್ 5ರವರೆಗೆ ಜೈಲಿಗೆ ಕಳಿಸಿದ್ದಾರೆ. ನಂತರ ಜಾರಿ ನಿರ್ದೇಶನಾಲಯ ಅವರನ್ನು ಈ ವಿಷಯದಲ್ಲಿ ಕಸ್ಟಡಿಯಲ್ ವಿಚಾರಣೆಯ ಮುಕ್ತಾಯದ ನಂತರ ಹಾಜರುಪಡಿಸಿದರು.
ಅಕ್ರಮ ಹಣ ವರ್ಗಾವಣೆ ತಡೆ ತನಿಖಾ ಸಂಸ್ಥೆ ಸಿಸೋಡಿಯಾ ಅವರನ್ನು ಏಳು ದಿನಗಳ ಕಾಲ ತನ್ನ ಕಸ್ಟಡಿಯಲ್ಲಿ ವಿಚಾರಣೆ ನಡೆಸಿದೆ.
ಸಿಬಿಐ ತನಿಖೆ ನಡೆಸುತ್ತಿರುವ ಪ್ರಮುಖ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಮಾರ್ಚ್ 25ಕ್ಕೆ ಮುಂದೂಡಿದೆ.
ಈಗ ರದ್ದಾದ ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು.