ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ನಡೆಯುತ್ತಿರುವ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್, ಬಿ.ಗೋಪಾಲ್ ಸೇರಿದಂತೆ ಹಲವು ದಲಿತ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಸಮ್ಮುಖದಲ್ಲಿ ಎಂಆರ್.ಎಚ್.ಎಸ್ ನ ಅಂಬಣ್ಣ (ರಾಯಚೂರು) ಅವರೊಂದಿಗೆ ಬೆಂಗಳೂರಿನ ಡಿಎಸ್ಎಸ್ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ಧಾರವಾಡದ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾರೇಶ್ ನಾಗಣ್ಣನವರ್, ವಿಜಯನಗರ ಅಲೆಮಾರಿ ಸಮುದಾಯದ ರಾಜ್ಯ ಮುಖಂಡ ಸಣ್ಣ ಮಾರಣ್ಣ ಮಾದಿಗ ದಂಡೋರದ ವೆಂಕಟೇಶ್ ಆಲೂರ್(ಯಾದಗಿರಿ), ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ನರಸಿಂಹಮೂರ್ತಿ (ತುಮಕೂರು) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ದಸಂಸ ಮುಖಂಡ ಮರಿಸ್ವಾಮಿ ಕೊಟ್ಟೂರು (ವಿಜಯನಗರ), ಯುವ ಮುಖಂಡರಾದ ಮುರಳೀಧರ ಮೇಲಿನಮನಿ(ಕೊಪ್ಪಳ), ಹತವಾಡಿ ಲಕ್ಷ್ಮಣ್ (ಬೆಂಗಳುರು), ವಿಜಯಕುಮಾರ್ (ಬೀದರ್), ಎಂಆರ್.ಎಚ್.ಎಸ್ ರಾಯಚೂರು ಜಿಲ್ಲಾ ಮುಖಂಡ ತಿಮ್ಮಪ್ಪ ಆಲ್ಕೂರು, ರಾಜಣ್ಣ (ಚಿತ್ರದುರ್ಗ), ುಡುಚಪ್ಪ ಯಲ್ಲಮ್ಮ ಮಳಗಿ (ಹಾವೇರಿ), ಆದಿ ಜಾಂಬವ ಜನಸಂಘದ ರಾಜ್ಯ ಮುಖಂಡ ಮುನಿಕೃಷ್ಣಯ್ಯ (ಬೆಂಗಳೂರು), ದಸಂಸ ಮುಖಂಡ ಯಲ್ಲಪ್ಪ ಗೊರಮಗೊಲ್ಲ (ಬೆಳಗಾವಿ), ಮಾರುತಿ ಸಿದ್ದಪ್ಪ ರಂಗಪುರಿ (ಬೆಳಗಾವಿ), ಬಿಎಸ್.ಪಿ ಮಾಜಿ ರಾಜ್ಯಾಧ್ಯಕ್ಷ ಬಿ.ಗೋಪಾಲ್, ದಾವಣಗೆರೆ ಜಿಲ್ಲಾ ದಸಂಸ ಮುಖಂಡ ಎ.ಡಿ.ಈಶ್ವರಪ್ಪ, ಅಂಬೇಡ್ಕರ್ ಸೇನೆ ರಾಜ್ಯ ಮುಖಂಡ ಪಂಡಿತ್ ಮುನಿವೆಂಕಟಪ್ಪ, ಬೆಳಗಾವಿ ಡಿಎಸ್ಎಸ್ ಮುಖಂಡ ಪ್ರಭಾಕರ್ ಚಲವಾದಿ ತೇರದಾಳ, ಹಾಸನದ ಶಿವಪ್ಪ ದಿಣ್ಣೇಕೆರೆ, ಎಚ್.ಪಿ.ಸುಧಾಮ್ ದಾಸ್ ಕಾಂಗ್ರೆಸ್ ಸೇರಿದ್ದಾರೆ.
ಮೂವತ್ತು ವರ್ಷಗಳ ಇತಿಹಾಸವಿರುವ ಒಳಮೀಸಲಾತಿ ಹೋರಾಟ ಕಳೆದ ಡಿಸೆಂಬರ್ ನಲ್ಲಿ ಪುನರಾರಂಭವಾಗಿತ್ತು. ಅದರ ಮುಂದಾಳತ್ವವನ್ನು ಅಂಬಣ್ಣ ವಹಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳನ್ನು ಕಟುವಾಗಿ ಟೀಕಿಸುತ್ತಾ ಹೊಲೆಯ ಮತ್ತು ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯದ ಕುರಿತು ದನಿ ಎತ್ತುತ್ತಾ ಬಂದಿರುವ ಅಂಬಣ್ಣ ಕಾಂಗ್ರೆಸ್ ಸೇರುವ ಮೂಲಕ ಹಲವು ರಾಜಕೀಯ ಕುತೂಹಲಗಳಿಗೆ ಕಾರಣರಾಗಿದ್ದಾರೆ.