ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೀಸಲಾತಿಗೆ ಸಂಬಂಧಿಸಿದಂತೆ ಇತಿಹಾಸವನ್ನು ಓದಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿರುವ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಮೀಸಲಾತಿ ಬಗ್ಗೆ ಕಾಂಗ್ರೆಸ್ ಗೆ ಮಾತನಾಡುವ ನೈತಿಕ ಹಾಗೂ ರಾಜಕೀಯ ಅಧಿಕಾರವಿಲ್ಲ ಎಂದರು.
ಈಗಾಗಲೇ ಮೀಸಲಾತಿಗೆ ಕಾನೂನು ರಚಿಸಿದ್ದು, ಆ ಪ್ರಕಾರ ನೇಮಕಾತಿ ಹಾಗೂ ಬಡ್ತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸಂವಿಧಾನದ ಶೆಡ್ಯೂಲ್ 9 ಕ್ಕೆ ಸೇರಿಸಲು ಸಚಿವ ಸಂಪುಟದ ಅನುಮೋದನೆಯಾಗಿದ್ದು, ಸಹಿಗಾಗಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ಹೇಳಿದರು.
ಕಾನೂನು ಇಲಾಖೆ ಸಲಹೆ ಪಡೆದು ಪ್ರಕ್ರಿಯೆ ಜಾರಿಗೊಳಿಸಿದೆ. ಶೆಡ್ಯೂಲ್ 9 ಗೆ ಸೇರ್ಪಡೆ ಮಾಡುವ ಬದ್ಧತೆ ಸರ್ಕಾರಕ್ಕಿದೆ ಎಂದು ಭರವಸೆ ನೀಡಿದರು.